ಬೆಂಗಳೂರು: ಮೈಕೋ ಸಿಗ್ನಲ್ನಿಂದ ಆನಪಾಳ್ಯ ಜಂಕ್ಷನ್ವರೆಗೆ ಸಂಚಾರವನ್ನು ದಿನಾಂಕ 01.04.2024 ರಿಂದ ಒಂದು ವರ್ಷದ ಅವಧಿಗೆ ಮುಚ್ಚಲಾಗುವುದು ಎಂದು ನಮ್ಮ ಮೆಟ್ರೋ ಮಾಧ್ಯಮ ಪ್ರಕಟಣೆಯಲ್ಲಿ ತಿಳಸಿದೆ.
ಲಕ್ಕಸಂದ್ರ ಸುರಂಗ ಮೆಟ್ರೋ ನಿಲ್ದಾಣದ ದಕ್ಷಿಣ ಭಾಗದ ಪ್ರವೇಶ ಕಾಮಗಾರಿಯ ನಿರ್ಮಾಣಕ್ಕೆ ಅನುಕೂಲವಾಗುವಂತೆ, ಬನ್ನೇರುಘಟ್ಟ ಮುಖ್ಯರಸ್ತೆಯಲ್ಲಿ ಉತ್ತರ ದಿಕ್ಕಿನ ಪಥವನ್ನು ಮೈಕೋ ಸಿಗ್ನಲ್ನಿಂದ ಆನಪಾಳ್ಯ ಜಂಕ್ಷನ್ವರೆಗೆ ಸಂಚಾರವನ್ನು ದಿನಾಂಕ 01.04.2024 ರಿಂದ ಒಂದು ವರ್ಷದ ಅವಧಿಗೆ ಮುಚ್ಚಲಾಗುವುದು. ಈ ಸಂಬಂಧ ಬನ್ನೇರುಘಟ್ಟ ಮುಖ್ಯರಸ್ತೆಯಲ್ಲಿ ಡೈರಿ ಸರ್ಕಲ್ ಕಡೆಯಿಂದ ಚಲಿಸುವ ವಾಹನಗಳು ಆನಪಾಳ್ಯ ಜಂಕ್ಷನ್ ಕಡೆಗೆ ಚಲಿಸಬೇಕಾದ ವಾಹನಗಳು ಮೈಕೋ ಸಿಗ್ನಲ್ನಲ್ಲಿ ಬಲಕ್ಕೆ ತಿರುಗಿ ಭೋಷ್ ಲಿಂಕ್ ರಸ್ತೆಯ ಮೂಲಕ ಆಡುಗೋಡಿ ಸಿಗ್ನಲ್ ತಲುಪಿ ಎಡಕ್ಕೆ ತಿರುಗಿ ಚಲಿಸಬೇಕು. ಆನಪಾಳ್ಯ ಜಂಕ್ಷನ್ನಿಂದ ಡೈರಿ ಸರ್ಕಲ್ ಕಡೆಗೆ ಚಲಿಸುವ ವಾಹನ ಸಂಚಾರದಲ್ಲಿ ಯಾವುದೆ ವ್ಯತ್ಯಯವಿರುವುದಿಲ್ಲ. ಡೈರಿ ಸರ್ಕಲ್ನಿಂದ ಶಾಂತಿನಗರ ಕಡೆಗೆ ಚಲಿಸುವ ವಾಹನಗಳು ವಿಲ್ಸನ್ ಗಾರ್ಡನ್ನ 7ನೇ ಮುಖ್ಯ ರಸ್ತೆಯಲ್ಲಿ ಎಡಕ್ಕೆ ತಿರುವು ತೆಗೆದುಕೊಳ್ಳುವುದು. ಸಾರ್ವಜನಿಕರು ಮೇಲಿನ ಬದಲಾವಣೆಗಳನ್ನು ಗಮನಿಸಿ ಸಹಕರಿಸಬೇಕಾಗಿ ವಿನಂತಿಸುತ್ತೇವೆ ಎಂದಿದ್ದಾರೆ.