ಜೆಡಿಎಸ್ ಪಕ್ಷದ ವರಿಷ್ಠ ಎಚ್.ಡಿ.ದೇವೇಗೌಡ ಅವರೊಂದಿಗೆ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಜಿಟಿ ದೇವೇಗೌಡ ಅವರು ‘ನಾನು ಚಾಮುಂಡೇಶ್ವರಿಯಲ್ಲಿ, ಮಗ, ಜಿ.ಡಿ.ಹರೀಶ್‌ಗೌಡ ಹುಣಸೂರಿನಲ್ಲಿ ಸ್ಪರ್ಧಿಸಲಿದ್ದೇವೆ. ಕೆ.ಆರ್.ನಗರಕ್ಕೆ ಸಾ.ರಾ.ಮಹೇಶ್, ಪಿರಿಯಾಪಟ್ಟಣಕ್ಕೆ ಕೆ.ಮಹದೇವ್, ತಿ.ನರಸೀಪುರಕ್ಕೆ ಅಶ್ವಿನ್‌ಕುಮಾರ್, ಎಚ್.ಡಿ.ಕೋಟೆಯಲ್ಲಿ ಮಾಜಿ ಶಾಸಕ ಚಿಕ್ಕಣ್ಣ ಪುತ್ರ ಜಯಪ್ರಕಾಶ್‌ಗೆ ಟಿಕೆಟ್ ಬಹುತೇಕ ಅಂತಿಮವಾಗಿದೆ’ ಎಂದು ಮಾಹಿತಿ ನೀಡಿದರು. ವರಿಷ್ಠರು ಪಕ್ಷದ ಜವಾಬ್ದಾರಿ ನೀಡುತ್ತಿದ್ದಂತೆ ಆ್ಯಕ್ಟಿವ್ ಆದ ಜಿಟಿಡಿಯವರು ಮೈಸೂರು ಭಾಗದ ಕ್ಷೇತ್ರಗಳ JDS ಅಭ್ಯರ್ಥಿಗಳ ಪಟ್ಟಿ ಘೋಷಿಸಿದ ಜಿಟಿಡಿ. ಗುರುವಾರದಿಂದಲೇ ಪಕ್ಷ ಸಂಘಟನೆಯಲ್ಲಿ ತೊಡಗಿದ್ದೇನೆ, ಇನ್ನು ಯಾವ ಗೊಂದಲಗಳೂ ಉಳಿದಿಲ್ಲ, ಅವರು ನಮಗೆ ಪ್ರೇರಣೆ. ಅವರನ್ನು ಸಂತೋಷವಾಗಿಡುವುದೇ ನಮ್ಮ ಸಂತೋಷ’ ಎಂದು ಪ್ರತಿಕ್ರಿಯಿಸಿದರು.