ಮೊದಲು ನಮ್ಮವರು ಕಟ್ಟಿದ ಸಂಸ್ಥೆ ಎಂಬ ಹೆಮ್ಮೆ ಕನ್ನಡಿಗರಿಗಿತ್ತು

ಸಾಂದರ್ಭಿಕ ಚಿತ್ರ
Advertisement

ಬೆಂಗಳೂರು: ಬ್ಯಾಂಕ್‌ಗಳನ್ನು ವಿಲೀನದಿಂದ ಬ್ಯಾಂಕುಗಳಲ್ಲಿ ವ್ಯವಹರಿಸುವ ರೀತಿ ಸಂಪೂರ್ಣ ಬದಲಾಗಿದೆ ಇದು ಕರ್ನಾಟಕದ ಮೇಲೆ ಸೇಡು ತೀರಿಸಿಕೊಳ್ಳುತ್ತಿದೆಯೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನರೇಂದ್ರ ಮೋದಿಯವರನ್ನು ಪ್ರಶ್ನಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದಾರೆ, “ದಶಕಗಳ ಕಾಲ ಕನ್ನಡಿಗರು ಬೆವರು ಹರಿಸಿ ಕಟ್ಟಿದ ವಿಜಯಾ ಬ್ಯಾಂಕ್‌, ಕಾರ್ಪೊರೇಷನ್ ಬ್ಯಾಂಕ್, ಸ್ಟೇಟ್ ಬ್ಯಾಂಕ್ ಆಫ್ ಮೈಸೂರು ಹಾಗೂ ಸಿಂಡಿಕೇಟ್ ಬ್ಯಾಂಕ್ ಗಳನ್ನು ವಿಲೀನದ ಹೆಸರಿನಲ್ಲಿ ಆಪೋಶನ ತೆಗೆದುಕೊಂಡಿದ್ದು ನೀವೇ ಅಲ್ಲವೇ ನರೇಂದ್ರ ಮೋದಿ ಅವರೇ? ಮೊದಲು ಈ ಬ್ಯಾಂಕುಗಳಲ್ಲಿ ವ್ಯವಹರಿಸುವಾಗ ನಮ್ಮವರು ಕಟ್ಟಿದ ಸಂಸ್ಥೆ ಎಂಬ ಹೆಮ್ಮೆ ಕನ್ನಡಿಗರಿಗಿತ್ತು, ಈಗ ಅವು ಕರುನಾಡೊಂದಿಗಿನ ಸಂಬಂಧ ಕಡಿದುಕೊಂಡು ಸಂಪೂರ್ಣ ಬದಲಾಗಿವೆ. ನಮ್ಮವರಿಗೆ ಮಾತ್ರ ಯಾಕೆ ಈ ಅನ್ಯಾಯ? ಕೇಂದ್ರ ಬಿಜೆಪಿ ಸರ್ಕಾರ ಕರ್ನಾಟಕದ ಮೇಲೆ ಸೇಡು ತೀರಿಸಿಕೊಳ್ಳುತ್ತಿದೆಯೇ? ಇದು ನನ್ನ ಪ್ರಶ್ನೆ ಮಾತ್ರವಲ್ಲ, ನಾಡಿನ ಆರೂವರೆ ಕೋಟಿ #ಸ್ವಾಭಿಮಾನಿ_ಕನ್ನಡಿಗರಪ್ರಶ್ನೆ ಎಂದು ಪ್ರಶ್ನಿಸಿದ್ದಾರೆ.