ಮೊದಲ ಬಾರಿಗೆ ಫೈನಲ್ ಪ್ರವೇಶಿಸಿದ ಆರ್‌ಸಿಬಿ

Advertisement

ನವದೆಹಲಿ:  ಮಹಿಳೆಯರ ಪ್ರೀಮಿಯರ್‌ ಲೀಗ್‌ನಲ್ಲಿ ಆರ್‌ಸಿಬಿ ಮಹಿಳೆಯರ ತಂಡ ಮುಂಬೈ ಇಂಡಿಯನ್ಸ್‌ ವಿರುದ್ಧ ರೋಚಕ ಗೆಲುವು ಸಾಧಿಸಿ ಫೈನಲ್‌ ತಲುಪಿದೆ.

ದೆಹಲಿಯ ಅರುಣ್‌ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಎಲಿಮಿನೇಟರ್‌ ಪಂದ್ಯದಲ್ಲಿ ಆರ್‌ಸಿಬಿ ತಂಡವು ಮುಂಬೈ ವಿರುದ್ಧ 5 ರನ್‌ಗಳ ಅಂತರದಲ್ಲಿ ಗೆಲುವು ಸಾಧಿಸುವ ಮೂಲಕ ಪ್ರಶಸ್ತಿ ಸುತ್ತಿಗೆ ಪ್ರವೇಶ ಪಡೆದಿದೆ.

ಇದೇ ಮೊದಲ ಬಾರಿಗೆ ಆರ್‌ಸಿಬಿ ತಂಡವು ಫೈನಲ್‌ ತಲುಪಿದ್ದು, ಮಾರ್ಚ್‌ 17 ಭಾನುವಾರ ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ ಟ್ರೋಫಿಗಾಗಿ ಸೆಣಸಾಡಲಿದೆ.