ಮೋದಿ ಗೋ ಬ್ಯಾಕ್: ಸಿಪಿಐಂ ಕಾರ್ಯಕರ್ತರು ಪೊಲೀಸ್ ವಶಕ್ಕೆ

Advertisement

ಕಲಬುರಗಿ: ಲೋಕಸಭೆ ಚುನಾವಣೆಗೆ ಕಲಬುರಗಿಯಿಂದ ಪ್ರಚಾರ ಆರಂಭಿಸಲು ನಗರಕ್ಕೆ ಆಗಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿಗೆ ‘ಗೋ ಬ್ಯಾಕ್ ಬ್ಯಾಕ್’ ಘೋಷಣೆಗಳು ಕೂಗುವ ಮೂಲಕ ಸಿಪಿಎಂ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಈ ವೇಳೆ ಹತ್ತಾರು ಜನರನ್ನು ಪೊಲೀಸರು ವಶಕ್ಕೆ ಪಡೆದರು.
ನಗರದ ಜಗತ್ ವೃತದಲ್ಲಿ ಜಮಾಯಿಸಿದ ಸಿಪಿಎಂ ಪಕ್ಷದ ಮುಖಂಡರು MGNREGA ಬಾಕಿ ವೇತನ ಬಿಡುಗಡೆ, ಬರಗಾಲದ ಬರ ಪರಿಹಾರ ಹಣ ಬಿಡುಗಡೆ, ರೈತರ ಸಾಲ ಮನ್ನಾ, NMMS ರದ್ದತ್ತಿಗೆ, ತೊಗರಿಗೆ ಕನಿಷ್ಟ ಬೆಂಬಲ ಬೆಲೆ ನಿಗದಿಪಡಿಸಿ ಪ್ರತಿ ಕ್ವಿಂಟಾಲ್ ಗೆ ೧೨೦೦೦ ಸಾವಿರ ಬೆಂಬಲ ನೀಡಬೇಕು ಎಂದು ಆಗ್ರಹಿಸಿದರು. ಈ ವೇಳೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಕೆ ನೀಲಾ, ಕರ್ನಾಟಕ ಪ್ರಾಂತ ರೈತ ಸಂಘಟನೆ ಜಿಲ್ಲಾ ಅಧ್ಯಕ್ಷ ಶರಣಬಸಪ್ಪ ಮಮಶೆಟ್ಟಿ, , ಭೀಮಶೆಟ್ಟಿ ಯಂಪಳ್ಳಿ, ಸುಧಾಮ ಧನ್ನಿ ಮತ್ತಿತರರನ್ನು ವಶಕ್ಕೆ ಪಡೆದರು.