ಬೆಂಗಳೂರು: ಅಪ್ರಾಪ್ತ ಬಾಲಕಿಯೊಬ್ಬಳಿಗೆ ಬಿಜೆಪಿ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಪ್ರಕರಣ ದಾಖಲಿಸಿದ್ದ ದೂರುದಾರೆ ಇಂದು ಸಾವನ್ನಪ್ಪಿದ್ದಾರೆ.
ಕೆಲ ತಿಂಗಳ ಹಿಂದೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಅಪ್ರಾಪ್ತ ಬಾಲಕಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಪ್ರಕರಣ ದಾಖಲಿಸಲಾಗಿತ್ತು. ಇದೀಗ ಬಿಎಸ್‌ವೈ ವಿರುದ್ಧ ಫೋಕ್ಸೋ ಪ್ರಕರಣ ದಾಖಲಿಸಿದ್ದ ದೂರುದಾರೆ ಸಾವನ್ನಪ್ಪಿದ್ದಾರೆ. ಕಳೆದ ಕೆಲವು ವರ್ಷಗಳಿಂದ ಮಾರಣಾಂತಿಕ ಖಾಯಿಲೆಯಿಂದ ಬಳಲುತ್ತಿದ್ದರು. ಬನ್ನೇರುಘಟ್ಟ ರಸ್ತೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.