ಯುಪಿಎಸ್‌ಸಿ ಫಲಿತಾಂಶ ಪ್ರಕಟ

Advertisement

ನವದೆಹಲಿ : ಕೇಂದ್ರ ಲೋಕಸೇವಾ ಆಯೋಗ ಫಲಿತಾಂಶ ಇಂದು ಪ್ರಕಟವಾಗಿದ್ದು, ಮಹಿಳೆಯರು ಉನ್ನತ ಸ್ಥಾನಗಳಲ್ಲಿ ಪ್ರಾಬಲ್ಯ ಸಾಧಿಸಿದ್ದು, ಮೊದಲ 4 ಸ್ಥಾನಗಳು ಮಹಿಳೆಯರ ಪಾಲಾಗಿದೆ.
ಯುಪಿಎಸ್‌ಸಿ ಪರೀಕ್ಷೆಯಲ್ಲಿ ಇಶಿತಾ ಕಿಶೋರ್ ನಂ. 1 ಸ್ಥಾನ ಪಡೆದುಕೊಂಡಿದ್ದು, ನಂತರ ಗರಿಮಾ ಲೋಹಿಯಾ, ಉಮಾ ಹರತಿ ಎನ್ ಮತ್ತು ಸ್ಮೃತಿ ಮಿಶ್ರಾ ಕ್ರಮವಾಗಿ 2, 3 ಹಾಗೂ 4 ನೇ ಸ್ಥಾನ ಪಡೆದುಕೊಂಡು ಪರೀಕ್ಷೆಯಲ್ಲಿ ಮಹಿಳೆಯರೇ ಮೇಲುಗೈ ಸಾಧಿಸಿದ್ದಾರೆ. ಯುಪಿಎಸ್‌ಸಿಯ ಅಭ್ಯರ್ಥಿಗಳು ತಮ್ಮ ಫಲಿತಾಂಶಗಳನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ – upsc.gov.in ಪರಿಶೀಲಿಸಬಹುದಾಗಿದೆ.