ರಕ್ಷಣೆ ಮಾಡಿದ್ದ ಹಾವು ಕಚ್ಚಿ ಉರಗ ತಜ್ಞ ಸ್ನೇಕ್‌ ನರೇಶ್‌ ಸಾವು

Advertisement

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ ನೂರಾರು ಹಾವುಗಳನ್ನು ಹಿಡಿದು ಜನರಿಗೆ ಜಾಗೃತಿ ಮೂಡಿಸುತ್ತಿದ್ದ ಉರಗ ತಜ್ಞ ಸ್ನೇಕ್‌ ನರೇಶ್‌ ಅವರು ಸ್ವತಃ ತಾವು ಹಿಡಿದು ಬ್ಯಾಗ್‌ನಲ್ಲಿ ಇಟ್ಟಿದ್ದ ನಾಗರಹಾವು ಕಚ್ಚಿ ಸಾವನ್ನಪ್ಪಿದ್ದಾರೆ.
ಚಿಕ್ಕಮಗಳೂರಿನಲ್ಲಿ ಹಾವು ಕಚ್ಚಿ ಉರಗತಜ್ಞ ದುರಂತ ಸಾವನ್ನಪ್ಪಿದ್ದಾರೆ. ಸೆರೆ ಹಿಡಿದ ಹಾವಿನಿಂದಲೇ ಸಾವನ್ನಪ್ಪಿದ್ದಾರೆ. ಮೃತ ದುರ್ದೈವಿಯನ್ನು ಸ್ನೇಕ್ ನರೇಶ್ (51) ಎಂದು ಗುರುತಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಸ್ನೇಕ್ ನರೇಶ್ ಎಂದೇ ಖ್ಯಾತಿಯಾಗಿದ್ದರು.
ಸಾವಿರಾರು ಹಾವುಗಳನ್ನ ಸೆರೆ ಹಿಡಿದು, ಕಾಡಿಗೆ ಬಿಟ್ಟು ಸಂರಕ್ಷಣೆ ಮಾಡಿದ್ದರು. ಇನ್ನು ಜಿಲ್ಲೆಯಾದ್ಯಂತ ಖ್ಯಾತಿ ಗಳಿಸಿದ್ದ ಹಿನ್ನೆಲೆಯಲ್ಲಿ 2013ರಲ್ಲಿ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿದ್ದರು. ಆದರೆ, ಸೋಲನುಭವಿಸಿದ್ದರು.
ಇನ್ನು ಜಿಲ್ಲೆಯಾದ್ಯಂತ ಶಾಲಾ ಮಕ್ಕಳಿಗೆ ಹಾವಿಗಳ ಬಗ್ಗೆ ಜಾಗೃತಿ ಮೂಡಿಸುತ್ತಿದ್ದರು. ಆದರೆ, ಈಗ ತಾವು ಸಂರಕ್ಷಣೆ ಮಾಡಿ ಬ್ಯಾಗ್‌ನಲ್ಲಿಟ್ಟಿದ್ದ ನಾಗರಹಾವಿನಿಂದಲೇ ಕಚ್ಚಿಸಿಕೊಂಡು ಸಾವನ್ನಪ್ಪಿದ್ದಾರೆ.