ಕುಂದಗೋಳ: ತಾಲ್ಲೂಕಿನ ಶಿರೂರ-ಸಂಶಿ ಮಾರ್ಗದಲ್ಲಿ ಟೆಂಪೋ ಪಲ್ಟಿಯಾಗಿ ಓರ್ವ ಸ್ಥಳದಲ್ಲಿಯೇ ಮೃತಪಟ್ಟು, ೧೩ ಕ್ಕೂ ಹೆಚ್ಚು ಜನರು ತೀವ್ರವಾಗಿ ಗಾಯಗೊಂಡಿದ್ದಾರೆ.
ಮೃತಪಟ್ಟ ವ್ಯಕ್ತಿ ದರ್ಶನ್ ಹಳ್ಳೆಪ್ಪನವರ ಎಂಬುವನಾಗಿದ್ದು, ಶಿರಹಟ್ಟಿ ತಾಲ್ಲೂಕು ಬನ್ನಿಕೊಪ್ಪ ಗ್ರಾಮದವನಾಗಿದ್ದಾನೆ.
ಹುಬ್ಬಳ್ಳಿಯ ಜಯಪ್ರಿಯ ಆಸ್ಪತ್ರೆಯಲ್ಲಿ ನೇತ್ರ ತಪಾಸಣೆ ಮತ್ತು ಶಸ್ತ್ರಚಿಕಿತ್ಸೆಗೆ ಆಸ್ಪತ್ರೆಯ ಟೆಂಪೋದಲ್ಲಿ ಶಿರಹಟ್ಟಿ ತಾಲ್ಲೂಕಿನ ಬನ್ನಿಕೊಪ್ಪ, ಬೆಳ್ಳಟ್ಟಿ ಮತ್ತು ಲಕ್ಷ್ಮೇಶ್ವರ ಹಾಗೂ ಇನ್ನೂ ಕೆಲ ಗ್ರಾಮದವರು ಸೇರಿ ಒಟ್ಟು ೧೬ಕ್ಕೂ ಹೆಚ್ಚು ಜನರು ಬರುತ್ತಿದ್ದರು. ಶಿರೂರ- ಸಂಶಿ ಮಾರ್ಗದಲ್ಲಿ ಟೆಂಪೋ ಪಲ್ಟಿಯಾಗಿ ಅಪಘಾತ ಸಂಭವಿಸಿದೆ. ಗಾಯಾಳುಗಳಿಗೆ ಕುಂದಗೋಳ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಿ ಹುಬ್ಬಳ್ಳಿ ಕಿಮ್ಸ್‌ಗೆ ದಾಖಲಿಸಲಾಗಿದೆ. ಪ್ರಕರಣ ಕುಂದಗೋಳ ಠಾಣೆಯಲ್ಲಿ ದಾಖಲಾಗಿದೆ