ಕೊಪ್ಪಳ: ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ರಾಜ್ಯಕ್ಕೆ ಬರೋದ್ರಿಂದ ರಾಜ್ಯ ಅಭಿವೃದ್ದಿಯಾಗಲಿದೆ. ಕೊಪ್ಪಳ ಜಿಲ್ಲೆಯ ಯಲಬುರ್ಗದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು. ಯಲಬುರ್ಗಾದಲ್ಲಿ ಮಾತನಾಡಿದ ಅವರು, ಪ್ರಧಾನಿ ಮೋದಿ ಬೆಳಗಾವಿ ಹಾಗೂ ಶಿವಮೊಗ್ಗಕ್ಕೆ ಬರುತ್ತಿದ್ದಾರೆ. ಎರಡು ಕಡೆ ಅಭಿವೃದ್ದಿ ಕಾರ್ಯ ಹಾಗೂ ರೋಡ್ ಶೋ ಮಾಡಲಿದ್ದಾರೆ ಎಂದು ಹೇಳಿದರು.
ವಿಧಾಸಭಾ ಚುನಾವಣೆಯಲ್ಲಿ ಸ್ಪರ್ಧಿಸುವೆ:
ನಾನು ಈ ಬಾರಿಯೂ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ ಎಂದು ಪ್ರತಿಕ್ರಿಯೆ ನೀಡಿ ವಯಸ್ಸಿನ ಆಧಾರದಲ್ಲಿ ಕೆಲವರಿಗೆ ಟಿಕೆಟ್ ತಪ್ಪುವ ಪಟ್ಟಿಯಲ್ಲಿ ಶೆಟ್ಟರ್ ಇದ್ದಾರೆ ಎಂಬ ಚರ್ಚೆಗೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ತೆರೆ ಎಳೆದಿದ್ದಾರೆ. ಮೋದಿ ಈ ದೇಶದ ನಾಯಕರು ಮತ್ತು ವಿಶ್ವದ ನಾಯಕರು. ಕಳೆದ ಎಂಟು ವರ್ಷದಿಂದ ಈ ದೇಶವನ್ನು ಮುನ್ನೆಡೆಸಿ ಬಲಿಷ್ಠ ರಾಷ್ಟ್ರವನ್ನಾಗಿ ರೂಪಿಸಿದ್ದಾರೆ. ನಾಳೆ ಬೆಳಗಾವಿ ಮತ್ತು ಶಿವಮೊಗ್ಗಕ್ಕೆ ಆಗಮಿಸುತ್ತಿದ್ದಾರೆ. ಶಿವಮೊಗ್ಗದಲ್ಲಿ ಹೊಸ ವಿಮಾನ ನಿಲ್ದಾಣ ಉದ್ಘಾಟನೆ ಹಾಗೂ ಬೆಳಗಾವಿಯಲ್ಲಿ ನವೀಕೃತ ರೈಲ್ವೆ ನಿಲ್ದಾಣದ ಉದ್ಘಾಟನೆಗೆ ಆಗಮಿಸುತ್ತಿದ್ದಾರೆ ಎಂದು ತಿಳಿಸಿದರು.
ಯಡಿಯೂರಪ್ಪ ಸದಾ ಸಕ್ರಿಯ:
ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಯಡಿಯೂರಪ್ಪ ಅವರೇ ಘೋಷಿಸಿದ್ದಾರೆ. ವಿದಾಯ ಹೇಳಿ ಮನೆಯಲ್ಲಿ ಕುಳಿತರೆ ಅದು ಬೇರೆ ವಿಚಾರ. ಆದರೆ, ಅವರು ಪಕ್ಷದ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತಿದ್ದಾರೆ. ಹಲವು ಸಂದರ್ಭಗಳಲ್ಲಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಲು ಶ್ರಮಿಸುವುದಾಗಿಯೂ ಸ್ಪಷ್ಟಪಡಿಸಿದ್ದಾರೆ.