ಬೆಂಗಳೂರು: ರಾಜ್ಯದಲ್ಲಿ ಮಾದಕವಸ್ತು ನಿಯಂತ್ರಣಕ್ಕೆ ಗಂಭೀರ ಕ್ರಮ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಮಾದಕ ವಸ್ತುಗಳ ಕಳ್ಳ ಸಾಗಾಣಿಕೆ ಹಾಗೂ ರಾಷ್ಟ್ರೀಯ ಭದ್ರತೆ ಕುರಿತ ದಕ್ಷಿಣ ರಾಜ್ಯಗಳ ಪ್ರಾದೇಶಿಕ ಸಮ್ಮೇಳನದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಕರ್ನಾಟಕದಲ್ಲಿ ಮಾದಕವಸ್ತು ನಿಯಂತ್ರಣದಲ್ಲಿ ಜೀರೊ ಟಾಲೆರನ್ಸ್ ಜಾರಿಗೊಳಿಸಲಾಗಿದ್ದು, ಮಾದಕವಸ್ತುಗಳ ನಿಯಂತ್ರಣಕ್ಕೆ ಸಮಾಜದ ಸಹಕಾರ ಮುಖ್ಯ. ಅಮಿತ್ ಶಾ ಅವರ ಮಾರ್ಗದರ್ಶನದಲ್ಲಿ ಕಾನೂನು ಅಪರಾಧವನ್ನು ನಿಯಂತ್ರಿಸುವ ಕೆಲಸವಾಗುತ್ತಿದೆ ಎಂದರು. ಮೊದಲು ಪ್ರತಿ ವರ್ಷ ವಾರ್ಷಿಕ ಸಾವಿರ ಪ್ರಕರಣಗಳು ದಾಖಲಾಗುತ್ತಿದ್ದವು. ಆದರೆ ಈಗ ಪ್ರತಿ ವರ್ಷ ಐದು ಸಾವಿರ ಪ್ರಕರಣಗಳು ದಾಖಲಾಗುತ್ತಿವೆ. ಹೆಚ್ಚಿನ ಸಂಖ್ಯೆಯಲ್ಲಿ ಹೆಚ್ಚಿನ ಜನರನ್ನು ವಿಚಾರಣೆಗೆ ಒಳಪಡಿಸಲಾಗುತ್ತಿರುವುದಲ್ಲದೆ ಬಹಳ ಪ್ರಕರಣಗಳಲ್ಲಿ ಶಿಕ್ಷೆಗೂ ಒಳಪಡಿಸಿದ್ದೇವೆ ಎಂದರು.