ಬೆಂಗಳೂರು: ಲೋಕಾಯುಕ್ತ ಪೊಲೀಸರು ರಾಜ್ಯದ ೬೦ ಕಡೆಗಳಲ್ಲಿ ಬುಧವಾರ ಬೆಳಗ್ಗೆ ೧೪ ಸರ್ಕಾರಿ ಅಧಿಕಾರಿಗಳ ಕಚೇರಿ, ಮನೆ ಹಾಗೂ ಫಾರ್ಮ್ಹೌಸ್‌ಗಳ ಮೇಲೆ ಹಠಾತ್ ದಾಳಿ ನಡೆಸಿದರು. ಈ ವೇಳೆ ಅಪಾರ ಪ್ರಮಾಣ ನಗದು, ಚಿನ್ನ, ಬೆಳ್ಳಿ ಆಭರಣ, ವಿದೇಶಿ ಉಡುಗೊರೆ, ಮೊಬೈಲ್ ಫೋನ್, ನಿವೇಶನ, ಫಾರ್ಮ್ಹೌಸ್ ಖರೀದಿಯ ದಾಖಲೆ ಪತ್ರಗಳು ಪತ್ತೆಯಾಗಿವೆ.
ದಾಳಿಯಲ್ಲಿ ೧೩ ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿಗಳು, ೧೨ ಡಿವೈಎಸ್ಪಿ, ೨೫ ಪೊಲೀಸ್ ಇನ್ಸ್‌ಪೆಕ್ಟರ್ ಸೇರಿದಂತೆ ಒಟ್ಟು ೧೩೦ ಅಧಿಕಾರಿಗಳು ದಾಳಿಯಲ್ಲಿ ಪಾಲ್ಗೊಂಡಿದ್ದರು.
ಬೆಂಗಳೂರು ಮಹಾನಗರ ಪಾಲಿಕೆ ಮುಖ್ಯ ಇಂಜಿನಿಯರ್ ಎಸ್.ಪಿ.ರಂಗನಾಥ್ ಮನೆ, ಕಚೇರಿ, ಫಾರ್ಮ್ಹೌಸ್ ಸೇರಿದಂತೆ ೫ ಸ್ಥಳಗಳಲ್ಲಿ ಲೋಕಾಯುಕ್ತ ಪೊಲೀಸರು ತಪಾಸಣೆ ಮಾಡಿದರು.