ರಾಜ್ಯಾದ್ಯಂತ ಜೂ.27ರಂದು ಕೆಂಪೇಗೌಡ ಜಯಂತಿ

Advertisement

ಬೆಂಗಳೂರು: ಕರ್ನಾಟಕ ಸರ್ಕಾರದ ವತಿಯಿಂದ ರಾಜ್ಯಾದ್ಯಂತ ಹಮ್ಮಿಕೊಂಡಿರುವ ಕೆಂಪೇಗೌಡ ಜಯಂತಿ ಕಾರ್ಯಕ್ರಮದ ಕುರಿತು ಇಂದು ವಿಧಾನಸೌಧದಲ್ಲಿ ಪೂರ್ವಭಾವಿ ಸಭೆ ನಡೆಯಿತು. ಜೂನ್‌ 27ರಂದು ರಾಜ್ಯ ಮಟ್ಟದ ಕೆಂಪೇಗೌಡ ಜಯಂತಿ ಕಾರ್ಯಕ್ರಮವು ಹಾಸನದಲ್ಲಿ ನಡೆಯಲಿದ್ದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಇದಕ್ಕೆ ಸಹಕಾರ ನೀಡಲಿದೆ ಎಂದು ಉಪ ಮುಖ್ಯಮಂತ್ರಿ ಡಿ. ಕೆ ಶಿವಕುಮಾರ ಹೇಳಿದ್ದಾರೆ
ಅದೇ ದಿನ ಮಧ್ಯಾಹ್ನ 12 ಗಂಟೆಗೆ ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ರಾಜ್ಯಮಟ್ಟದ ಕಾರ್ಯಕ್ರಮ ನಡೆಯಲಿದೆ. ಬೆಂಗಳೂರಿನ ಎಲ್ಲ ಗೋಪುರಗಳಿಂದ ಜ್ಯೋತಿ ಹೊರಡಲಿದ್ದು ಐವರು ಸಚಿವರು ಅದರ ನೇತೃತ್ವವಹಿಸಲಿದ್ದಾರೆ. ಉಳಿದಂತೆ ತಾಲ್ಲೂಕು ಮಟ್ಟದಲ್ಲಿ ಸರ್ಕಾರದ ವತಿಯಿಂದಲೇ ಕೆಂಪೇಗೌಡ ಜಯಂತಿ ಕಾರ್ಯಕ್ರಮ ನಡೆಯಲಿದೆ.


ಜೂನ್‌ 28ರಿಂದ ಜುಲೈ 5ರವರೆಗೆ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ಕೆಂಪೇಗೌಡ ಜಯಂತಿ ಕಾರ್ಯಕ್ರಮಗಳು ನಡೆಯಲಿದ್ದು, ಸ್ಥಳೀಯ ಶಾಸಕರು ಅದರ ನೇತೃತ್ವ ವಹಿಸಿದ್ದಾರೆ. ರಾಜ್ಯ ಮಟ್ಟದ ಕೆಂಪೇಗೌಡ ಪ್ರಶಸ್ತಿಗಾಗಿ ಸಮಿತಿ ರಚಿಸಲಾಗಿದ್ದು ಸಾಧಕರ ಪಟ್ಟಿ ಮಾಡಲಾಗುತ್ತಿದೆ. ಬೆಂಗಳೂರಿನ 198 ವಾರ್ಡ್‌ಗಳಲ್ಲೂ ಒಬ್ಬೊಬ್ಬ ಸಾಧಕರನ್ನು ಆರಿಸಿ ಬಿಬಿಎಂಪಿ ವತಿಯಿಂದ ಪ್ರಶಸ್ತಿ ನೀಡಲಾಗುವುದು ಎಂದಿದ್ದಾರೆ.