ಬಾಳೆಹೊನ್ನೂರು: ರಾಷ್ಟ್ರೀಯ ಪಕ್ಷಗಳು ರಾಜ್ಯದಲ್ಲಿ ಮುಸಲ್ಮಾನರನ್ನು ನೆಮ್ಮದಿಯಾಗಿ ಇರಲು ಬಿಟ್ಟಿಲ್ಲ. ಬರುವ ಚುನಾವಣೆಯಲ್ಲಿ ಜೆಡಿಎಸ್‌ಗೆ ಅಧಿಕಾರ ನೀಡಿ. ನಿಮ್ಮ ತಂಟೆಗೆ ಯಾರು ಬರುತ್ತಾರೆ ನೋಡೋಣ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಭಾನುವಾರ ಇಲ್ಲಿನ ಜೇಸಿ ವೃತ್ತದಲ್ಲಿ ಆಯೋಜಿಸಿದ್ದ ಪಂಚರತ್ನ ರಥಯಾತ್ರೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಮಗೆ 5 ವರ್ಷ ಸಂಪೂರ್ಣ ಆಡಳಿತ ನಡೆಸಲು ಅವಕಾಶ ನೀಡಿದರೆ ಯಾವುದೇ ಧರ್ಮ, ಜಾತಿಯ ಸೋಂಕಿಲ್ಲದೆ ಪಂಚರತ್ನ ಕಾರ್ಯಕ್ರಮಗಳನ್ನು ಜಾರಿಗೆ ತರಲಾಗುವುದು ಎಂದರು.