ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರು ಐಪಿಎಸ್ ಅಧಿಕಾರಿ ಡಿ. ರೂಪಾ ವಿರುದ್ಧ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರಿಗೆ ದೂರು ನೀಡಿದ್ದಾರೆ.
ಒಟ್ಟು ನಾಲ್ಕು ಪುಟಗಳ ದೂರು ಸಲ್ಲಿಸಿದ ಅವರು, ಸಾಮಾಜಿಕ ಜಾಲತಾಣಗಳಲ್ಲಿ ರೂಪಾ ಮಾಡಿರುವ ಆರೋಪದ ಲಿಂಕ್ಗಳನ್ನು ಅದರೊಂದಿಗೆ ಲಗತ್ತಿಸಿದ್ದಾರೆ. ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮಗಳಲ್ಲಿ ಆಧಾರರಹಿತ, ಸುಳ್ಳು ಹಾಗೂ ವೈಯಕ್ತಿಕ ಆರೋಪ ಮಾಡಿ ಸೇವಾ ನಿಯಮ ಉಲ್ಲಂಘಿಸಿದ ಐಪಿಎಸ್ ಅಧಿಕಾರಿ ರೂಪಾ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.