ಕೋಲಾರ: ಅರಣ್ಯ ಇಲಾಖೆ ಒತ್ತುವರಿ ತೆರವು ಕಾರ್ಯಾಚರಣೆಗೆ ಮುಂದಾಗಿದ್ದು, ಕಾರ್ಯಾಚರಣೆ ಮಾಡದಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸಂಸದ ಮುನಿಸ್ವಾಮಿ ಮನವಿ ಮಾಡಿದ್ದಾರೆ.
ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲೂಕು ಪಾತಪಲ್ಲಿ ಗ್ರಾಮದ ಬಳಿ ನಡೆಯುತ್ತಿರುವ ಕಾರ್ಯಾಚರಣೆ ಸ್ಥಳಕ್ಕೆ ಕೋಲಾರ ಸಂಸದ ಮುನಿಸ್ವಾಮಿ ಭೇಟಿ ನೀಡಿ ಸಣ್ಣ ರೈತರ ಒತ್ತುವರಿ ತೆರವು ಮಾಡಬೇಡಿ, ಜಂಟಿ ಸರ್ವೆ ಕಾರ್ಯ ಮುಗಿಸಿದ ನಂತರ ತೆರವು ಮಾಡಿ ಎಂದು ಮನವಿ ಮಾಡಿದ್ದಾರೆ.
ಸ್ಥಳಕ್ಕೆ ಮುನಿಸ್ವಾಮಿ ಭೇಟಿ ಹಿನ್ನಲೆ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.