ನವದೆಹಲಿ: ಒಡಿಶಾ ರೈಲು ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ತುರ್ತು ಸಭೆ ನಡೆಸಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.
ಸಭೆಯಲ್ಲಿ ಕೇಂದ್ರ ಸಚಿವ ಅಮಿತ್ ಶಾ, ಕಾರ್ಯಾಚರಣೆ ನಡೆಸುತ್ತಿರುವ ರಕ್ಷಣಾ ಪಡೆಯ ಮುಖ್ಯಸ್ಥರು, ರೈಲ್ವೆ ಸಚಿವಾಲಯ ಮುಖ್ಯಸ್ಥರು ಉಪಸ್ಥಿತರಿದ್ದರು. ಸಭೆ ಬಳಿಕ ಪ್ರಧಾನಿ ಮೋದಿ ರೈಲು ಅಪಘಾತದ ಸ್ಥಳಕ್ಕೆ ಭೇಟಿ ನೀಡಲಿದ್ದು, ನಂತರ ಕಟಕ್‌ನಲ್ಲಿರುವ ಆಸ್ಪತ್ರೆಗೆ ಭೇಟಿ ಗಾಯಾಳುಗಳನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಲಿದ್ದಾರೆ ಎಂದು ತಿಳಿದುಬಂದಿದೆ.
ಮೂರು ರೈಲುಗಳ ಮಧ್ಯೆ ನಡೆದ ಈ ಭೀಕರ ಅಪಘಾತದಲ್ಲಿ 250ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದು, 900ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.