ಬೆಂಗಳೂರು: ಐಪಿಎಸ್ ಅಧಿಕಾರಿ ಡಿ.ರೂಪ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಶ್ರೀನಿವಾಸ ಹರೀಶ್ ಕುಮಾರ್ ಅವರಿದ್ದ ನ್ಯಾಯಪೀಠವು ವಿಚಾರಣಾ ನ್ಯಾಯಾಲಯ ಹೊರಡಿಸಿದ್ದ ನಿರ್ಬಂಧಕಾಜ್ಞೆ ಆದೇಶವನ್ನು ತೆರವುಗೊಳಿಸಿ ಇಂದು ಆದೇಶಿಸಿದೆ. ಐಎಎಸ್ ರೋಹಿಣಿ ಸಿಂಧೂರಿ ವಿರುದ್ದ ಐಪಿಎಸ್ ಅಧಿಕಾರಿ ಡಿ.ರೂಪ ಯಾವುದೇ ಮಾನಹಾನಿಕರ ಹೇಳಿಕೆ ನೀಡದಂತೆ ಹೊರಡಿಸಿದ್ದ ನಿರ್ಭಂಧಕ ಆದೇಶವನ್ನ ಹೈಕೋರ್ಟ್ ತೆರವುಗೊಳಿಸಿದೆ. ವಿಚಾರಣಾ ನ್ಯಾಯಾಲಯ ನೀಡಿದ್ದ ಆದೇಶವನ್ನ ಹೈಕೋರ್ಟ್ ಏಕಸದಸ್ಯ ಪೀಠ ತೆರವುಗೊಳಿಸಿ ಆದೇಶ ನೀಡಿದೆ.