ರೋಹಿತ್​ ಭರ್ಜರಿ ಸೆಂಚುರಿ

Advertisement

ಭಾರತ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ಆಸ್ಟ್ರೇಲಿಯಾ ವಿರುದ್ಧ ನಾಗ್ಪುರದಲ್ಲಿ ಭರ್ಜರಿ ಬ್ಯಾಟಿಂಗ್​ ಮಾಡುವ ಮೂಲಕ ಟೆಸ್ಟ್‌ ವೃತ್ತಿ ಜೀವನದ 9ನೇ ಶತಕ ಪೂರೈಸಿದರು. ನಾಯಕ ರೋಹಿತ್ ಶರ್ಮಾ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಅದ್ಭುತ ಶತಕ ಬಾರಿಸುವ ಮೂಲಕ ಭಾರತ ತಂಡದ ಸ್ಕೋರ್​ ಹೆಚ್ಚಿಸುವಲ್ಲಿ ನೆರವಾಗಿದ್ದಾರೆ. ರೋಹಿತ್ ನಾಯಕನಾಗಿ ಬಾರ್ಡರ್ ಗವಾಸ್ಕರ್ ಟ್ರೋಫಿಯಲ್ಲಿ ಮೊದಲ ಬಾರಿಗೆ ಆಡುತ್ತಿದ್ದು, ನಾಗ್ಪುರದ ವಿದರ್ಭ ಕ್ರಿಕೆಟ್ ಅಸೋಸಿಯೇಷನ್ ​​ಸ್ಟೇಡಿಯಂನಲ್ಲಿ ರೋಹಿತ್ ತಮ್ಮ ಟೆಸ್ಟ್ ವೃತ್ತಿಜೀವನದ 9ನೇ ಶತಕ ಸಿಡಿಸಿದ್ದಾರೆ. ಸುದೀರ್ಘ ಅವಧಿಯ ಬಳಿಕ ರೋಹಿತ್‌ ಶತಕ ಸಿಡಿಸಿದ್ದಾರೆ.