ಬ್ರಿಟನ್ ಪ್ರವಾಸದಲ್ಲಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಲಂಡನ್ ಬ್ಯೂರೋ ಆಫ್ ಲ್ಯಾಂಬೆತ್‌ನಲ್ಲಿರುವ ಬಸವೇಶ್ವರರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಬ್ರಿಟಿಷ್ ಸಂಸತ್ತಿನ ಎದುರು ಭಾರತದ ಶ್ರೇಷ್ಠ ಸಮಾಜ ಸುಧಾರಕ ಬಸವಣ್ಣನ ಪ್ರತಿಮೆಯನ್ನು ನೋಡುವುದು ಪ್ರತಿಯೊಬ್ಬ ಭಾರತೀಯನಿಗೆ ಹೆಮ್ಮೆಯ ವಿಷಯವಾಗಿದೆ ಎಂದು ರಾಹುಲ್ ಗಾಂಧಿ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಸಂಸದ ರಾಹುಲ್, ಬಸವಣ್ಣನವರು ಭಾರತದ ಪ್ರಜಾಪ್ರಭುತ್ವದ ಹರಿಕಾರರು. ಶ್ರೇಷ್ಠ ಸಮಾಜ ಸುಧಾರಕರು ಆಗಿದ್ದಾರೆ.