ಬಿಜೆಪಿಯ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಅವರಿಗೆ ಈ ಬಾರಿ ಚುನಾವಣೆಗೆ ಟಿಕೆಟ್ ಕೊಡಲ್ಲ ಎಂಬ ಮಾಹಿತಿ ಹೊರಬಿದಿದ್ದೆ.
ಹುಬ್ಬಳ್ಳಿ ಸೆಂಟ್ರಲ್ ಕ್ಷೇತ್ರದಿಂದ ಸ್ಪರ್ಧಿಸಿ ಮುಖ್ಯಮಂತ್ರಿಯಾಗಿದ್ದ ಜಗದೀಶ ಶೆಟ್ಟರ ಅವರಿಗೆ ಹೈಕಮಾಂಡ್ ಶಾಕ್ ಕೊಟ್ಟಿದೆ. ಈ ಕುರಿತಂತೆ ಶೆಟ್ಟರ ಅವರಿಗೆ ವರಿಷ್ಠರು ಕರೆ ಮಾಡಿ ನಿಮಗೆ ಟಿಕೆಟ್ ಇಲ್ಲ ಎಂದು ತಿಳಿಸಿದ್ದಾರೆ. ಹೊಸಬರಿಗೆ ಅವಕಾಶ ನೀಡಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.
ಈಗಾಗಲೇ ಹುಬ್ಬಳ್ಳಿಯ ಶೆಟ್ಟರ ಮನೆಯ ಆವರಣದಲ್ಲಿ ಅವರ ಅಭಿಮಾನಿಗಳು ಜಮಾಯಿಸಿದ್ದು, ಶೆಟ್ಟರ ಅವರಿಗೆ ಟಿಕೆಟ್ ನೀಡಿ ಎಂದು ಆಗ್ರಹಿಸುತ್ತಿದ್ದಾರೆ. ಇದರ ಮಧ್ಯ ಜಗದೀಶ ಶೆಟ್ಟರ ಬೆಂಗಳೂರಿನತ್ತ ಹೊರಟಿದ್ದಾರೆ ಎಂದು ತಿಳಿದುಬಂದಿದೆ.