ಲೋಕಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳ ಬಗ್ಗೆ ಗಮನ ಸೆಳೆದ ಬಿ ವೈ ರಾಘವೇಂದ್ರ

ಬಿ ವೈ ರಾಘವೇಂದ್ರ
Advertisement

ಶಿವಮೊಗ್ಗ ಸಂಸದರಾದ ಶ್ರೀ ಬಿ.ವೈ. ರಾಘವೇಂದ್ರರವರು ಲೋಕಸಭಾ ಅಧಿವೇಶನದಲ್ಲಿ ಇಂದು ಶೂನ್ಯ ವೇಳೆಯಲ್ಲಿ ಅಡಿಕೆ ರೈತರ ಸಮಸ್ಯೆಗಳ ಕುರಿತು ಮಹತ್ವದ ವಿಷಯವನ್ನು ಗಮನ ಸೆಳೆದರು.
ಕರ್ನಾಟಕವೂ ಸೇರಿದಂತೆ ದೇಶದ 10 ಕ್ಕೂ ಹೆಚ್ಚು ರಾಜ್ಯಗಳಲ್ಲಿ ಅಡಿಕೆ ಬೆಳೆಯಲಾಗುತ್ತಿದ್ದು. ಕರ್ನಾಟಕದಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಶಿವಮೊಗ್ಗ ಸೇರಿದಂತೆ 16 ಜಿಲ್ಲೆಗಳಲ್ಲಿ ಅಡಿಕೆ ಬೆಳೆಯಲಾಗುತ್ತದೆ. ಕರ್ನಾಟಕದಲ್ಲಿ ಸುಮಾರು 10 ಲಕ್ಷ ಕುಟುಂಬಗಳು ಅಡಿಕೆ ಕೃಷಿಯನ್ನು ಅವಲಂಬಿಸಿವೆ. ದೇಶದ ಒಟ್ಟು ಉತ್ಪಾದನೆಯಾದ 16 ಲಕ್ಷದ 50 ಸಾವಿರ ಮೆಟ್ರಿಕ್ ಟನ್‌ಗಳಲ್ಲಿ ಕರ್ನಾಟಕ ರಾಜ್ಯವು ಸುಮಾರು 69% ಅಡಿಕೆಯನ್ನು ಉತ್ಪಾದಿಸುತ್ತದೆ. ಇದರ ಒಟ್ಟು ಮೌಲ್ಯ ಸುಮಾರು 8 ಸಾವಿರದ 250 ಕೋಟಿ. ಇದು ಜಿಎಸ್‌ಟಿ ಮತ್ತು ವಿವಿಧ ಉತ್ಪನ್ನಗಳ ಮೇಲೆ ಸೆಸ್ ರೂಪದಲ್ಲಿ ಬೊಕ್ಕಸಕ್ಕೆ 24 ಸಾವಿರ 750 ಕೋಟಿ ರೂಪಾಯಿಗಳ ಬೃಹತ್ ಆದಾಯವನ್ನು ನೀಡುತ್ತಿದೆ ಎಂದರು.