ಮೈಸೂರು: ಕಾಂಗ್ರೆಸ್ ಮುಕ್ತ ಕರ್ನಾಟಕ ಮಾಡಿ ಎಂದು ಕೇಂದ್ರ ಗೃಹ ಅಮಿತ್ ಶಾ ಹೇಳಿದರು, ವರುಣಾ ಕ್ಷೇತ್ರದಲ್ಲಿ ಬಿಜೆಪಿ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು ವರುಣಾ ಜನರು ಸಿದ್ದರಾಮಯ್ಯಗೆ ಮತ ನೀಡಬೇಡಿ. ವಿ ಸೋಮಣ್ಣ ಅವರನ್ನು ಗೆಲ್ಲಿಸಿದರೇ, ವರುಣಾವನ್ನು ಇಡೀ ರಾಜ್ಯದಲ್ಲಿ ಮಾದರಿ ಕ್ಷೇತ್ರವನ್ನಾಗಿ ಮಾಡುತ್ತಾರೆ. ಕಮಲದ ಬಟನ್ ಮೇಲೆ ಒತ್ತಿ. ನರೇಂದ್ರ ಮೋದಿಯವರನ್ನು 2024ರಲ್ಲಿ ಮತ್ತೊಮ್ಮೆ ಪ್ರಧಾನಿ ಮಾಡಿ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೇ ಲಿಂಗಾಯತರಿಗೆ ನೀಡಿದ ಮೀಸಲಾತಿ ಹಿಂಪಡೆಯುತ್ತದೆ. ದಲಿತರಿಗೆ ನೀಡಲಾದ ಮೀಸಲಾತಿಯನ್ನು ತೆಗೆಯಗುತ್ತಾರೆ. ಅವರಿಗೆ ತುಷ್ಟಿಕರಣ ಹೊರತು ಮತ್ತೇನು ಕಾಣಿಸುವುದಿಲ್ಲ ಎಂದರು. ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕ್ಷೇತ್ರದ ಅಭ್ಯರ್ಥಿ ವಿ.ಸೋಮಣ್ಣ, ಟಿ.ನರಸೀಪುರದ ಅಭ್ಯರ್ಥಿ ಡಾ.ರೇವಣ್ಣ, ನಂಜನಗೂಡು ಅಭ್ಯರ್ಥಿ ಹರ್ಷವರ್ಧನ್ ಭಾಗಿಯಾಗಿದ್ದಾರೆ.