ರಾಯಚೂರು: ಜಿಲ್ಲೆಯ ಲಿಂಗಸುಗೂರು ಪಟ್ಟಣದಲ್ಲಿ ಬಿಜೆಪಿ ಕಾರ್ಯಕರ್ತ ರಾಜು ತಂಬಾಕೆ ಅವರಿಂದ ಮುಸ್ಲಿಂ ಮಹಿಳೆಯರ ವಿರುದ್ಧ ಆಕ್ಷೇಪಾರ್ಹ ವಾಟ್ಸಾಪ್ ಪೋಸ್ಟ್ ಮಾಡಿದ ಆರೋಪದ ಮೇಲೆ ಪೊಲೀಸರು ರಾಜು ತಂಬಾಕೆ ಅವರನ್ನು ಬಂಧಿಸಿದ್ದಾರೆ.
ವಾಟ್ಸಾಪ್ ಸ್ಟೇಟಸ್ನಲ್ಲಿ ‘ಮುಸ್ಲಿಂ ಮಹಿಳೆಯರು ಮಕ್ಕಳನ್ನು ಹೆರುವ ಫ್ಯಾಕ್ಟರಿಗಳು’ ಎಂದು ಬಿಂಬಿಸುವ ವ್ಯಂಗ್ಯಚಿತ್ರವನ್ನು ಪೋಸ್ಟ್ ಮಾಡಿದ ರಾಜು ಅವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಗುರುವಾರ ತಡರಾತ್ರಿ ಪೊಲೀಸ್ ಠಾಣೆ ಮುಂದೆ ಸೇರಿದ ನೂರಾರು ಮುಸ್ಲಿಂ ಸಮುದಾಯದವರಿಂದ ಪ್ರತಿಭಟನೆ ನಡೆದಿತ್ತು, ಆರೋಪಿ ವಿರುದ್ಧ ಪ್ರಕರಣ ದಾಖಲಿಸಿ ವಶಕ್ಕೆ ಪಡೆದು ವಿಚಾರಣೆ ನಡೆಸುದಾಗಿ ಡಿಎಸ್ಪಿ ವೇಣುಗೋಪಾಲ್ ಭರವಸೆ ನೀಡಿದ್ದರಿಂದ ಪ್ರತಿಭಟನೆ ಕೈ ಬಿಟ್ಟ ಮುಸ್ಲಿಂ ಬಾಂಧವರು
ಘಟನೆಗೆ ಸಂಬಂಧಿಸಿದಂತೆ ಆರೋಪಿ ರಾಜು ವಿರುದ್ಧ ಲಿಂಗಸಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಮಧ್ಯರಾತ್ರಿ 3 ಗಂಟೆಗೆ ಆರೋಪಿ ರಾಜುನನ್ನು ವಶಕ್ಕೆ ಪಡೆದು ಪೊಲೀಸರಿಂದ ವಿಚಾರಣೆ ನಡೆದಿದೆ.