ಹಾವೇರಿ: ಹೊಲದಲ್ಲಿ ಕೆಲಸ ಮಾಡುವಾಗ ವಿದ್ಯುತ್ ತಂತಿ ತಗುಲಿ ರೈತನೋರ್ವ ಮೃತಪಟ್ಟ ಘಟನೆ ಗುರುವಾರ ತಾಲೂಕಿನ ಹಳೇರಿತ್ತಿ ಗ್ರಾಮದಲ್ಲಿ ನಡೆದಿದೆ.
ಉಮೇಶ ಬೆಳವಗಿ(33) ಮೃತಪಟ್ಟ ರೈತ. ಹೊಲದಲ್ಲಿ ಟ್ರ್ಯಾಕ್ಟರ್ ಮೂಲಕ ರಂಟೆ ಹೊಡೆಯುವಾಗ ಹಿಂಬದಿಯಲ್ಲಿ ಕಟ್ಟಾಗಿ ಬಿದ್ದಿದ್ದ ಸರ್ವಿಸ್ ವಿದ್ಯುತ್ ತಂತಿ ಗಮನಿಸದೇ ಟ್ರ್ಯಾಕ್ಟರ್ ಚಲಾಯಿಸಿದ್ದರಿಂದ ವಿದ್ಯುತ್ ಪ್ರವಹಿಸಿ ಮೃತಪಟ್ಟಿದ್ದಾರೆ.
ಸ್ಥಳಕ್ಕೆ ಗುತ್ತಲ ಠಾಣೆ ಪೋಲಿಸರು ಭೇಟಿ ನೀಡಿ ಪರಿಶೀಲಿಸಿದ್ದು, ಈ ಕುರಿತು ಗುತ್ತಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.