ಕೊಪ್ಪಳ: ತಾಲ್ಲೂಕಿನಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ ಮಕ್ಕಳ ಸುರಕ್ಷತಾ ದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಆ. 30ರಂದು ಕೊಪ್ಪಳ ತಾಲ್ಲೂಕಿನ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಹಾಗೂ ಅಂಗನವಾಡಿಗಳಿಗೆ ರಜೆ ಘೋಷಿಸಲಾಗಿದೆ.
ಉಳಿದ ತಾಲ್ಲೂಕುಗಳಲ್ಲಿ ಆಯಾ ಪ್ರದೇಶದ ಸ್ಥಳೀಯ ಪರಿಸ್ಥಿತಿಗೆ ಅನುಗುಣವಾಗಿ, ಶಾಲಾ ಮುಖ್ಯೋಪಾಧ್ಯಾಯರು, ಆಯಾ ಕ್ಷೇತ್ರ ಶಿಕ್ಷಣಾಧಿಕಾರಿಗಳೊಂದಿಗೆ ಸಮಾಲೋಚನೆ ಮಾಡಿ, ಪೂರ್ವಾನುಮತಿ ಪಡೆದು ರಜೆ ನೀಡಬಹುದಾಗಿದೆ. ಅಲ್ಲದೆ ಆಯಾ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು (ಸಿಡಿಪಿಓ) ಜಿಲ್ಲಾಮಟ್ಟದ ಅಧಿಕಾರಿಯೊಂದಿಗೆ ಸಮಾಲೋಚಿಸಿ, ಪೂರ್ವಾನುಮತಿ ಪಡೆದು ರಜೆ ನೀಡುವಂತೆ ಸೂಚನೆ ನೀಡಲಾಗಿದೆ ಎಂದು ಶಿಕ್ಷಣ ಇಲಾಖೆಯ ಉಪನಿರ್ದೇಶಕ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.