ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಶಾಲಾ ಮಕ್ಕಳಿಗೆ ಪತ್ರ ಬರೆದು, ಪ್ರಿಯ ಮಕ್ಕಳೇ, ಜ್ಞಾನದೇಗುಲಕ್ಕೆ ಬನ್ನಿ ಎಂದು ಸ್ವಾಗತ ಬಯಸಿ ಪತ್ರ ಬರೆದಿದ್ದಾರೆ, ಪತ್ರದಲ್ಲಿ ಅವರು ರಜಾದಿನಗಳನ್ನು ತಂದೆ-ತಾಯಿ, ಗೆಳೆಯ-ಗೆಳತಿಯರ ಜೊತೆ ಆನಂದದಿಂದ ಕಳೆದ ನಿಮ್ಮನ್ನು ಶಾಲೆಗಳು ಕೈಬೀಸಿ ಕರೆಯುತ್ತಿವೆ. ಕಳೆದ ಎರಡು –ಮೂರು ವರ್ಷಗಳಲ್ಲಿ ಕೊರೊನಾ ವೈರಾಣುವಿನಿಂದಾಗಿ ನೀವೆಲ್ಲ ವಿದ್ಯಾರ್ಥಿ ಜೀವನವನ್ನು ಸಂಪೂರ್ಣ ಅನುಭವಿಸಲಾಗದೆ ಅನೇಕ ಬಗೆಯ ಸಂಕಟ-ಸಂಕಷ್ಟಕ್ಕೆ ಈಡಾಗಿದ್ದೀರಿ. ಈಗ ನಾವು ಆ ಸವಾಲನ್ನು ಗೆದ್ದಿದ್ದೇವೆ, ಆರೋಗ್ಯದ ಪಾಠವನ್ನು ಕಲಿತಿದ್ದೇವೆ. ರಾಜ್ಯದ ಈ ಬಾರಿಯ ಶೈಕ್ಷಣಿಕ ವರ್ಷ ಇಂತಹ ಬದಲಾವಣೆಯ ತಂಗಾಳಿಯೊಂದಿಗೆ ಪ್ರಾರಂಭವಾಗಿದೆ. ಎಂದು ಬರೆದ ಅವರು ಜ್ಞಾನ ದೇಗುಲಕ್ಕೆ ನಿಮಗೆಲ್ಲರಿಗೂ ಸ್ವಾಗತ ಎಂದಿದ್ದಾರೆ.