ಶಾಸಕ ಹರೀಶ್ ಪೂಂಜಾ ವಿರುದ್ಧ ಪ್ರಕರಣ ದಾಖಲು

Advertisement


ಮಂಗಳೂರು: ಬೆಳ್ತಂಗಡಿಯ ಕಳೆಂಜದ ವಿವಾದಿತ ಅರಣ್ಯ ಇಲಾಖೆ ಜಾಗದಲ್ಲಿ ಮನೆ ನಿರ್ಮಾಣಕ್ಕೆ ಅವಕಾಶ ಕಲ್ಪಿಸುವ ವೇಳೆ ಉಪ್ಪಿನಂಗಡಿ ಅರಣ್ಯಾಧಿಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿ ಬೆದರಿಕೆ ಹಾಕಿದ್ದಾರೆ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಪ್ಪಿನಂಗಡಿ ಅರಣ್ಯಾಧಿಕಾರಿ ಜಯಪ್ರಕಾಶ್ ಕೆ.ಕೆ. ನೀಡಿದ ದೂರಿನ ಅನ್ವಯ ಶಾಸಕ ಹರೀಶ್ ಪೂಂಜಾ ವಿರುದ್ಧ ಐಪಿಸಿ 1860(U/s -143,353,504,149) ಅಡಿಯಲ್ಲಿ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳ್ತಂಗಡಿ ತಾಲೂಕು ಕಳೆಂಜ ಗ್ರಾಮದ ಸರ್ವೆ ನಂಬ್ರ ೩೦೯ರಲ್ಲಿ ಲೋಲಾಕ್ಷ ಗೌಡ ಮೀಸಲು ಅರಣ್ಯ ಪ್ರದೇಶವನ್ನು ಅತಿಕ್ರಮಣ ಮಾಡಿ ಮೀಸಲು ಅರಣ್ಯ ಪ್ರದೇಶದಲ್ಲಿ ಮನೆ ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದರು. ಈ ಮೂಲಕ ಹಿರಿಯ ಅಧಿಕಾರಿಗಳ ಸೂಚನೆಯಂತೆ ಅ.9 ರಂದು ಬೆಳಗ್ಗೆ ಇಲಾಖಾ ಅಧಿಕಾರಿ ಮತ್ತು ಸಿಬ್ಬಂದಿಗೆ ತೆರಳಿದ್ದೆ. ಈ ವೇಳೆ ಲೋಲಾಕ್ಷ ಗೌಡ ಮೀಸಲು ಅರಣ್ಯ ಪ್ರದೇಶದಲ್ಲಿ ಮನೆ ನಿರ್ಮಿಸಲು ಫೌಂಡೇಶನ್ ಹಾಕಿರುವುದು ಕಂಡುಬಂದಿದೆ. ಕೂಡಲೇ ನಿವೇಶನವನ್ನು ತೆರೆಯಲು ಲೋಲಾಕ್ಷ ಗೌಡರಿಗೆ ಸೂಚಿಸಿದೆ. ಆದರೆ ಅವರು ಕಾರಣ ಮನೆ ಫೌಂಡೇಶನನ್ನು ಅರಣ್ಯ ಇಲಾಖಾ ಅಧಿಕಾರಿ ಮತ್ತು ಸಿಬ್ಬಂದಿ ಮೂಲಕ ಸೂಚಿಸಲು ಮುಂದಾದರು. ಆ ವೇಳೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ತಮ್ಮ ಬೆಂಬಲಿಗರೊಂದಿಗೆ ಆಗಮಿಸಿ ತೆರವು ಕಾರ್ಯಾಚರಣೆಯನ್ನು ವಿರೋಧಿಸಿ, ಅದನ್ನು ತಡೆದರು. ಜೊತೆಗೆ ಅಧಿಕಾರಿಗಳ ಸಮ್ಮುಖದಲ್ಲಿ ಉಪ್ಪಿನಂಗಡಿ ಅರಣ್ಯಾಧಿಕಾರಿಯಾಗಿರುವ ತನ್ನನ್ನು ಅವಾಚ್ಯ ಪದವನ್ನು ಬಳಸಿ ನಿಂದಿಸದೆ, ನಿವೇಶನ ಪಡೆದಿದ್ದಲ್ಲಿ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಬೆದರಿಕೆ ಹಾಕಿದರು. ಆದುದರಿಂದ ಅರಣ್ಯ ಇಲಾಖಾ ಅಧಿಕಾರಿಗಳು ಕರ್ತವ್ಯಕ್ಕೆ ಹಾಜರಾಗಿ ಉಪ್ಪಿನಂಗಡಿ ಅರಣ್ಯಾಧಿಕಾರಿಯಾಗಿರುವ ತನ್ನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ, ಬೆದರಿಕೆ ಹಾಕಿರುವ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಮತ್ತು ಅವರ ಬೆಂಬಲಿಗರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಉಪ್ಪಿನಂಗಡಿ ಅರಣ್ಯಾಧಿಕಾರಿ ಜಯಪ್ರಕಾಶ್ ಕೆ.ಕೆ. ಅ.13ರಂದು ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

ಜನರಿಗಾಗಿ ಜೈಲಿಗೆ ಹೋಗಲು ಸಿದ್ಧ
ನನ್ನ ಕ್ಷೇತ್ರದ ಜನರ ಸಮಸ್ಯೆ ಪರಿಹರಿಸಲು ನಾನು ಸದಾ ಸಿದ್ದನಿದ್ದು, ನಾನು ಶಾಸಕನಾಗಿರುವುದು ನನ್ನ ಜನರ ಸೇವೆಗೆ ಮತ್ತು ಅವರ ರಕ್ಷಣೆಗೆ ಜೈಲಿಗೆ ಹೋಗಲು ಸಿದ್ಧವಾಗಿದೆ. ಕಾಂಗ್ರೆಸ್ ಸರ್ಕಾರದಲ್ಲಿ ಜನರ ಸಮಸ್ಯೆಗೆ ಧ್ವನಿಯಾದ ಒಬ್ಬ ಜನಪ್ರತಿನಿಧಿಯನ್ನು ಹೀಗೆ ಕಾಡಿದರೆ ಜನಸಾಮಾನ್ಯರು ಕಾಂಗ್ರೆಸ್ ಸರ್ಕಾರದಲ್ಲಿ ಹೇಗೆ ಬದುಕಬೇಕು? ಮುಖ್ಯಮಂತ್ರಿಗಳೇ, ಅರಣ್ಯ ಸಚಿವರೇ ನಿಮ್ಮ ಈ ಬೆದರಿಕೆ ತಂತ್ರಗಳಿಗೆ ನಾನು ಬೆದರಿಸುವುದಿಲ್ಲ. ಮತ್ತೆ ಹೇಳುತ್ತಿದ್ದೇನೆ ಬಡವರಿಗಾಗಿ ಇಂತಹ ನೂರು ಕೇಸು ಹಾಕಿಸಿಕೊಳ್ಳುವುದಕ್ಕೂ ಸಿದ್ಧನಿದ್ದೇನೆ, ಜೈಲು ಸೇರಲು ತಯಾರಿದ್ದೇನೆ ಶಾಸಕ ಹರೀಶ್ ಪೂಂಜಾ