ಶಿವಮೊಗ್ಗ: ಲೋಕಸಭಾ ಕ್ಷೇತ್ರದ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಬಿ ವೈ ರಾಘವೇಂದ್ರ ರವರ ನಾಮಪತ್ರ ಸಲ್ಲಿಸಿದರು.
ನಾಮಪತ್ರ ಸಲ್ಲಿಕೆ ಮುನ್ನ ಶ್ರೀ ಗಣಪತಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಲಾಯಿತು. ತೆರೆದ ವಾಹನದಲ್ಲಿ ಮೂವರು ಮಾಜಿ ಮುಖ್ಯಮಂತ್ರಿಗಳಾದ-ಬಿಎಸ್ ಯಡಿಯೂರಪ್ಪ, ಹೆಚ್ ಡಿ ಕುಮಾರಸ್ವಾಮಿ ಮತ್ತು ಬಸವರಾಜ ಬೊಮ್ಮಾಯಿ. ಅವರೊಂದಿಗೆ ಶಿವಮೊಗ್ಗ ಶಾಸಕ ಚನ್ನಬಸ್ಸಪ್ಪ ಮತ್ತು ಮಾಜಿ ಶಾಸಕ ಹಾಗೂ ಕುಮಾರ್ ಬಂಗಾರಪ್ಪ ಹಾಗೂ ಬಿಜೆಪಿ ಮತ್ತು ಜೆಡಿಎಸ್ ಪ್ರಮುಖರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.