ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ದುಬೈ ತಲುಪಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ

Advertisement

ಅಬುಧಾಬಿ: ದುಬೈನಲ್ಲಿ ನಡೆಯಲಿರುವ 28ನೇ ಶೃಂಗಸಭೆಯಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಯುಎಇಗೆ ತೆರಳಿದ್ದು, ದುಬೈನಲ್ಲಿ ಅದ್ಧೂರಿ ಸ್ವಾಗತ ದೊರೆತಿದೆ. ಮೋದಿ ಅವರು ದುಬೈ ತಲುಪುತ್ತಲೇ ಯುಎಇನಿಂದ ಸಾಂಪ್ರದಾಯಿಕವಾಗಿ ಸ್ವಾಗತ ದೊರೆಯಿತು. ಇದಾದ ಬಳಿಕ ಅನಿವಾಸಿ ಭಾರತೀಯರು ನರೇಂದ್ರ ಮೋದಿ ಅವರನ್ನು ಸಾಂಸ್ಕೃತಿಕವಾಗಿ ಸ್ವಾಗತಿಸಿದರು. ಕಾನ್ಫರೆನ್ಸ್‌ ಆಫ್‌ ದಿ ಪಾರ್ಟೀಸ್‌ ಶೃಂಗಸಭೆಯಲ್ಲಿ ಪ್ರಮುಖವಾಗಿ ಹವಾಮಾನ ಬದಲಾವಣೆ ಕುರಿತು ಚರ್ಚಿಸಲಾಗುತ್ತದೆ. ಅದರಲ್ಲೂ, ಹವಾಮಾನ ಬದಲಾವಣೆಯ ಕ್ರಿಯಾಯೋಜನೆ ರೂಪಿಸಲು ಇದು ಪ್ರಮುಖವಾಗಿದೆ ಎಂದು ತಿಳಿದುಬಂದಿದೆ. ಅಭುದಾಬಿಯ ಶೇಖ್‌ ಮೊಹಮ್ಮದ್‌ ಬಿನ್‌ ಅಲ್‌ ನಹ್ಯಾನ್‌ ಅವರ ಆಹ್ವಾನದ ಮೇರೆಗೆ ಮೋದಿ ಅವರು ಅಬುಧಾಬಿಗೆ ತೆರಳಿದ್ದಾರೆ. ಸುಮಾರು 200 ದೇಶಗಳ ನಾಯಕರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.