ಸಚಿನ್ ಭೇಟಿಯಾದ ಸಿಎಂ

Advertisement

ನವದೆಹಲಿ: ದೆಹಲಿಯ ವಿಮಾನ ನಿಲ್ದಾಣದಲ್ಲಿ ಮಾಸ್ಟರ್ ಸಚಿನ್ ತೆಂಡೂಲ್ಕರ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿಯಾಗಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು ಜಾಗತಿಕ ಕ್ರಿಕೆಟ್‌ನ ದಂತಕಥೆ, ಲಿಟ್ಲ್ ಮಾಸ್ಟರ್ ಸಚಿನ್ ತೆಂಡೂಲ್ಕರ್ ಅವರು ಇಂದು ದೆಹಲಿಯ ವಿಮಾನ ನಿಲ್ದಾಣದಲ್ಲಿ ಆಕಸ್ಮಿಕವಾಗಿ ಎದುರಾದ ವೇಳೆ ಕುಶಲೋಪರಿ ವಿಚಾರಿಸಿ, ಪ್ರೀತಿಯಿಂದ ಬೀಳ್ಕೊಟ್ಟೆ. ಸಚಿನ್ ತೆಂಡೂಲ್ಕರ್ ನನ್ನ ಅಚ್ಚುಮೆಚ್ಚಿನ ಆಟಗಾರ, ದಶಕಗಳ ಕಾಲ ತೆಂಡೂಲ್ಕರ್ ಅವರ ಆಟವನ್ನು ಆಸ್ವಾದಿಸಿದ್ದೇನೆ ಎಂದು ಬರೆದುಕೊಂಡಿದ್ದಾರೆ.