ಸಚಿವ ಅಲಂಗೀರ್ ಆಲಂ ಬಂಧನ

Advertisement

ರಾಂಚಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರ್ಖಂಡ್‌ನ ಗ್ರಾಮೀಣಾಭಿವೃದ್ಧಿ ಸಚಿವ ಅಲಂಗೀರ್ ಆಲಂ ಅವರನ್ನ ಜಾರಿ ನಿರ್ದೇಶನಾಲಯ ಬಂಧಿಸಿದೆ.
ಇದೇ ತಿಂಗಳ ಮೇ 6ರಂದು ಸಚಿವರ ಆಪ್ತ ಕಾರ್ಯದರ್ಶಿ ಸಂಜೀವ್ ಲಾಲ್ ಮತ್ತು ಅವರ ಮನೆಕೆಲಸಗಾರ ಜಹಾಂಗೀರ್ ಆಲಂ ಮನೆ ಮೇಲೆ ಇಡಿ ಅಧಿಕಾರಿಗಳ ತಂಡ ದಾಳಿ ನಡೆಸಿ 35 ಕೋಟಿ ರೂ.ಗಳನ್ನು ವಶಪಡಿಸಿಕೊಂಡು ಮರುದಿನವೇ ಇಬ್ಬರನ್ನೂ ಬಂಧಿಸಿತ್ತು. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳವಾರ ಸಚಿವರನ್ನ 10 ಗಂಟೆಗಳ ಕಾಲ ವಿಚಾರಣೆ ನಡೆಸಿದ್ದ ಇಡಿ, ಬುಧವಾರ ಬಂಧಿಸಿದೆ ಎಂದು ಮೂಲಗಳು ತಿಳಿಸಿವೆ.