ಸತೀಶ್ ಜಾರಕಿಹೋಳಿ ಮತ್ತೊಂದು ವಿವಾದಾತ್ಮಕ ವಿಡಿಯೋ ವೈರಲ್

ಸತೀಶ
Advertisement

ಬೆಳಗಾವಿ: ನಿಪ್ಪಾಣಿಯಲ್ಲಿ ನಡೆದ ಮಾನವ ಬಂಧುತ್ವ ವೇದಿಕೆಯ ಕಾರ್ಯಕ್ರಮದಲ್ಲಿ ಸತೀಶ್ ಜಾರಕಿಹೊಳಿ ನೀಡಿದ ಮತ್ತೊಂದು ಹೇಳಿಕೆ ಇದೀಗ ವಿವಾದಕ್ಕೆ ಕಾರಣವಾಗಿದ್ದು, ಹೇಳಿಕೆಯ ವಿಡಿಯೋ ವೈರಲ್ ಆಗುತ್ತಿದೆ.
ಧರ್ಮವೀರ ಸಂಭಾಜಿ ಮಹಾರಾಜರನ್ನ ಬ್ರಿಟಿಷರು ಹಿಡಿದು ಹತ್ಯೆ ಮಾಡಿದರು ಎಂದಿರುವ ಸತೀಶ ಜಾರಕಿಹೊಳಿ ವಿಡಿಯೋವನ್ನು ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ಟ್ವಿಟರ್‌ನಲ್ಲಿ ಹಂಚಿಕೊಂಡು ಈ ರೀತಿಯ ನಾನ್‌ಸೆನ್ಸ್ ಹೇಳಿಕೆಯನ್ನು ನೀವು ಒಪ್ಪುತ್ತೀರಾ ಎಂದು ರಾಹುಲ್ ಗಾಂಧಿ ಅವರನ್ನು ಪ್ರಶ್ನಿಸಿದ್ದಾರೆ.
ನವೆಂಬರ್ 6 ರಂದು ನಡೆದ ಮಾನವ ಬಂಧುತ್ವ ವೇದಿಕೆಯ ಕಾರ್ಯಕ್ರಮದಲ್ಲಿ ಮಾತನಾಡಿದ ಸತೀಶ್ ಜಾರಕಿಹೊಳಿ, ಧರ್ಮವೀರ ಸಂಭಾಜಿ ಮಹಾರಾಜರನ್ನ ಬ್ರಿಟಿಷರು ಹಿಡಿದು ಹತ್ಯೆ ಮಾಡಿದರು ಎಂದಿದ್ದಾರೆ.
ಶಿವಾಜಿ ಮಹಾರಾಜರ ಊಟದಲ್ಲಿ ಧರ್ಮವೀರ ಸಂಭಾಜಿ ಮಹಾರಾಜ ವಿಷ ಹಾಕಿದ್ದರು. ಹೀಗಾಗಿ ಅವರನ್ನು ಹಿಡಿದು ಬ್ರಿಟಿಷರ ಹತ್ಯೆ ಮಾಡಿದರು. ಹೀಗಿದ್ದೂ ಅವರಿಗೆ ಧರ್ಮವೀರ ಸಂಭಾಜಿ ಎಂಬ ಹೆಸರುಟ್ಟು ಇತಿಹಾಸ ಬರೆದಿದ್ದಾರೆ ಎಂದಿದ್ದಾರೆ. ಈ ದೇಶದ ಇತಿಹಾಸ ಬಹಳ ವಿಚಿತ್ರವಾಗಿದೆ. ಇಂಥ ಇತಿಹಾಸ ತಿಳಿಯಲು ಬಹಳ ಸಮಯ ಬೇಕು ಎಂದು ಹೇಳಿದ್ದಾರೆ.
ಸದ್ಯ ಸತೀಶ್ ಜಾರಕಿಹೊಳಿ ನೀಡಿದ ವಿವಾದಾತ್ಮಕ ಹೇಳಿಕೆಯ 42 ಸೆಕೆಂಡ್‌ಗಳುಳ್ಳ ಈ ವಿಡಿಯೋ ವೈರಲ್ ಆಗುತ್ತಿದೆ. ಭಾಷಣದ ವಿಡಿಯೋವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡ ಮಹಾರಾಷ್ಟ್ರ ಡಿಸಿಎಂ ದೇವೇಂದ್ರ ಫಡ್ನವಿಸ್ ಅವರು ಈ ರೀತಿಯ ನಾನ್‌ಸೆನ್ಸ್ ಹೇಳಿಕೆಯನ್ನು ನೀವು ಒಪ್ಪುತ್ತೀರಾ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಪ್ರಶ್ನೆ ಮಾಡಿದ್ದಾರೆ.