ಸರ್ಕಾರದ ವಕ್ತಾರರಾಗಿ ಐದು ಸಚಿವರ ನೇಮಕ

Advertisement

ಬೆಂಗಳೂರು: ರಾಜ್ಯ ಸರ್ಕಾರದ ವಕ್ತಾರರನ್ನು ನೇಮಿಸಿ ಆದೇಶ ಹೊರಡಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಕಾರ್ಮಿಕ ಸಚಿವ ಸಂತೋಷ್ ಲಾಡ್, ಕಂದಾಯ ಸಚಿವ ಕೃಷ್ಣ ಬೈರೇಗೌಡ ಹಾಗೂ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ, ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರನ್ನು ಸರ್ಕಾರದ ವಕ್ತಾರನ್ನಾಗಿ ನೇಮಕ ಮಾಡಲಾಗಿದೆ. ರಾಜ್ಯ ಸರ್ಕಾರದ ಸಾಧನೆಗಳು, ಕೆಲಸ ಕಾರ್ಯಗಳನ್ನು ಜನರಿಗೆ ತಿಳಿಸುವ ನಿಟ್ಟಿನಲ್ಲಿ ನಾಲ್ವರು ಪ್ರಭಾವಿ ಸಚಿವರನ್ನು ರಾಜ್ಯ ಸರ್ಕಾರದ ವಕ್ತಾರರನ್ನಾಗಿ ಮಾಡಿ ಸಿಎಂ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ. ಈ 5 ಮಂದಿ ಸಚಿವರಿಗೆ ದಾಖಲೆಗಳು ಹಾಗೂ ಮಾಹಿತಿಗಳನ್ನು ಕಾಲ ಕಾಲಕ್ಕೆ ಒದಗಿಸುವಂತೆ ಎಲ್ಲಾ ಇಲಾಖೆಗಳ ಮುಖ್ಯಸ್ಥರಿಗೆ ಸೂಚನೆಯನ್ನು ನೀಡಲಾಗಿದೆ ಎಂದಿದ್ದಾರೆ.