ಬೆಳಗಾವಿ: ಮಹಾರಾಷ್ಟ್ರದಲ್ಲಿ ಮರಾಠಿ ಭಾಷಿಕ ಪುಂಡರ ಅಟ್ಟಹಾಸ ಮತ್ತೆ ಮುಂದುವರೆದಿದ್ದು, ಮಂಗಳವಾರ 8 ಕರ್ನಾಟಕ ಸಾರಿಗೆ ಬಸ್ ಸೇರಿದಂತೆ ವಿವಿಧ ವಾಹನಗಳಿಗೆ ಕಪ್ಪು ಮಸಿ ಬಳಿದು ಕಲ್ಲು ತೂರಾಟ ನಡೆಸಿ, ಕೆಲವು ಮರಾಠಿ ಭಾಷಿಕರು ಮತ್ತೆ ತಮ್ಮ ಪುಂಡಾಟಿಕೆ ಮೆರೆದಿರುವ ಘಟನೆ ನಡೆದಿದೆ.
ಮಹಾರಾಷ್ಟ್ರದದ ಪುಣೆ ಡಿಪೋದಲ್ಲಿರುವ ಕರ್ನಾಟಕಕ್ಕೆ ಸೇರಿದ 8ಕ್ಕೂ ಹೆಚ್ಚು ಬಸ್ಸಿಗೆ ಉದ್ಭವ ಠಾಕ್ರೆ ಬಣದ ಕಾರ್ಯಕರ್ತರು ಮಸಿ ಬಳಿದು ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಕರವೇ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ನಡೆದಿದೆ.
ಇಂದು ಬೆಳಗಾವಿಯಲ್ಲಿ ಕರವೇ ಕಾರ್ಯಕರ್ತರು ಮಹಾರಾಷ್ಟ್ರದ ವಾಹನಗಳಿಗೆ ಕಲ್ಲು ತೂರಿ ಮಸಿ ಬಳಿದಿರುವುದರಿಂದ ಪುಣೆಯಲ್ಲಿ ಉದ್ಭವ ಠಾಕ್ರೆ ಬಣದ ಕಾರ್ಯಕರ್ತರು ಕರ್ನಾಟಕದ ಬಸ್ಸಿನ ಮೇಲೆ ಜೈ ಮಹಾರಾಷ್ಟ್ರ ಎಂದು ಬರವಣಿಗೆ ಬರೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾತ್ರವಲ್ಲ ಕರ್ನಾಟಕದ ನೋಂದಣಿ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆಯೂ ವರದಿಯಾಗಿದೆ.