ಕೊಪ್ಪಳ : ರೈತ ಸಂಘದ ಅಧ್ಯಕ್ಷ ಮಲ್ಲಪ್ಪ ಹವಾಲ್ದಾರ ನಿಧನರಾಗಿ 15 ದಿನಗಳ ಅಂತರದಲ್ಲಿ ಪ್ರಧಾನ ಕಾರ್ಯದರ್ಶಿ ಬಸಪ್ಪ ಅಮ್ಮಣ್ಣನವರ್ ಕೊನೆಯುಸಿರೆಳೆದರು.
ಕಳೆದ ಜ.19ರಂದು ನಿವೃತ್ತ ಅರಣ್ಯಾಧಿಕಾರಿ, ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಮಲ್ಲಪ್ಪ ಹವಾಲ್ದಾರ ಅಕಾಲಿಕ ಮರಣ ಹೊಂದಿದ್ದರು. ಈ ಬೆನ್ನಲ್ಲೇ , ಅದೇ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಬಸಪ್ಪ ಶಿವಲಿಂಗಪ್ಪ ಅಮ್ಮಣ್ಣನವರ್ ಫೆ.2ಕ್ಕೆ ನಿಧನರಾಗಿರುವುದು ರೈತ ಸಂಘಕ್ಕೆ ಭರಿಸಲಾಗದ ನಷ್ಟವಾಗಿದೆ. ಈ ಮೂಲಕ ರೈತ ಸಂಘದ ಈ ಸ್ನೇಹಿತರು ಸಾವಿನಲ್ಲೂ ಒಂದಾಗಿದ್ದಾರೆ.