ಧಾರವಾಡ: ಧಾರವಾಡದಲ್ಲಿ ಮುಖ್ಯಮಂತ್ರಿಗಳ ಕಾರ್ಯಕ್ರಮಕ್ಕೆ ಅಡ್ಡಿ ಮಾಡಿದ ಪಿಎಸ್ಐ ಮರುಪರೀಕ್ಷೆ ಬಯಸಿದ ವಿದ್ಯಾರ್ಥಿಗಳು.
ಧಾರವಾಡದಲ್ಲಿ ನಡೆಯುತ್ತಿದ್ದ ತ್ಯಾಗವೀರ ಶಿರಸಂಗಿ ಲಿಂಗರಾಜರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿಗಳು ಆಗಮಿಸಿದ ಸಂದರ್ಭದಲ್ಲಿ ಅಡ್ಡಿಪಡಿಸಲು ಯತ್ನಿಸಿದರು.
ಪಿಎಸ್ಐ ವಿದ್ಯಾರ್ಥಿಗಳಿಂದ ಮರುಪರೀಕ್ಷೆ ನಡೆಸಲು ಆಗ್ರಹಿಸಿ ಮುಖ್ಯಮಂತ್ರಿಗಳ ವಿರುದ್ಧ ಘೋಷಣೆ ಕೂಗಿ ಅಡ್ಡಿಪಡಿಸಲು ಯತ್ನಿಸಿದರು. ಅಲ್ಲದೇ ಕಪ್ಪು ಬಟ್ಟೆ ಪ್ರದರ್ಶನಕ್ಕೆ ಯುವಕರು ಮುಂದಾಗಿದ್ದರು.
ತಕ್ಷಣ ಸ್ಥಳದಲ್ಲಿದ್ದ ಪೊಲೀಸರು ಸುಮಾರು ೩೦ಕ್ಕೂ ಹೆಚ್ಚು ಅಭ್ಯರ್ಥಿಗಳನ್ನು ವಶಕ್ಕೆ ಪಡೆದುಕೊಂಡರು.