ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ 63 ನೇ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಹುಟ್ಟು ಹಬ್ಬದ ಶುಭಾಶಯ ಕೋರಿದರು.
ಇದೇ ವೇಳೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಕೂಡ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಹುಟ್ಟು ಹಬ್ಬದ ಶುಭಾಶಯ ಕೋರಿದರು.
ಇದಕ್ಕೂ ಮುನ್ನ ಸಿಎಂ ಬಸವರಾಜ್ ಬೊಮ್ಮಾಯಿ ತಮ್ಮ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ ಹುಬ್ಬಳ್ಳಿಯ ನಂದಿ ಬಡಾವಣೆಯಲ್ಲಿರುವ ತಂದೆ-ತಾಯಿ ಸಮಾಧಿಗೆ ತೆರಳಿ ಪೂಜೆ ಸಲ್ಲಿಸಿದರು.