ಸಿಡಿಲು ಬಡಿದು ರೈತ ಸಾವು

Advertisement

ಕೊಪ್ಪಳ: ಸಿಡಿಲು ಬಡಿದು ರೈತನೋರ್ವ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕುಷ್ಟಗಿ ತಾಲೂಕಿನ ಬಚನಾಳ ಗ್ರಾಮದಲ್ಲಿ ನಡೆದಿದೆ.
ತಾಲೂಕಿನ ಬಚನಾಳ ಗ್ರಾಮದ ರೈತ ಈಶಪ್ಪ ಕರಡಪ್ಪ ಕಲಮಳ್ಳಿ(35) ಮೃತಪಟ್ಟ ದುರ್ದೈವಿ ಎಂದು ಗುರುತಿಸಲಾಗಿದೆ. ಬಿತ್ತನೆ ಮಾಡುವ ಸಂದರ್ಭದಲ್ಲಿ ಏಕಾಏಕಿ ಗುಡುಗು ಸಹಿತ ಮಳೆಯಾಗುತ್ತಿದ್ದು ಈ ವೇಳೆಯಲ್ಲಿ ಸಿಡಿಲು ಬಡಿದು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.