ಬೆಳಗಾವಿ: ಡಿ.ಕೆ. ಶಿವಕುಮಾರ ಶಿಕ್ಷಣ ಸಂಸ್ಥೆಗಳ ಮೇಲಿನ ಸಿಬಿಐ ದಾಳಿಗೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ ಎಂದು ಕಂದಾಯ ಸಚಿವ ಆರ್. ಅಶೋಕ ಸ್ಪಷ್ಟಪಡಿಸಿದರು.
ಸುವರ್ಣ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಈ ಹಿಂದೆ ಜನಾರ್ಧನ ರೆಡ್ಡಿ ಮೇಲೆ ಸಿಬಿಐ, ಸಿದ್ದೇಶ್ವರ ಮನೆ ಮೇಲೆ ಐಟಿ ದಾಳಿಯಾಗಿತ್ತು. ಆಗ ಯಾರೊಬ್ಬರೂ ಮಾತನಾಡಲಿಲ್ಲ. ಕಾಂಗ್ರೆಸ್ ನವರ ಮೇಲೆ ಆದಾಗ ಮಾತ್ರ ಮಾತನಾಡುತ್ತಾರೆ ಎಂದರು.
ಪದೇ ಪದೇ ಬಿಜೆಪಿ ವಿರುದ್ಧ ಹೇಳಿಕೆ ನೀಡುವುದನ್ನು ಕಾಂಗ್ರೆಸ್ ನಿಲ್ಲಿಸಬೇಕು. ಸಿಬಿಐ ಸ್ವತಂತ್ರ ಸಂಸ್ಥೆ. ಕಾನೂನಿನ ಪ್ರಕಾರವೇ ಅದು ಕೆಲಸ ಮಾಡುತ್ತದೆ. ನ್ಯಾಯಾಲಯ ಇದೆ. ಅಲ್ಲಿ ಅವರು ಹೋರಾಟ ಮಾಡಲಿ. ಅದನ್ನು ಬಿಟ್ಟು ಬಿಜೆಪಿ ಮೇಲೆ ಹಾಕಿದರೆ ಹೇಗೆ ಎಂದು ಪ್ರಶ್ನಿಸಿದರು.