ಸಿರಿಯಾದಲ್ಲಿ ಉಗ್ರರ ಅಟ್ಟಹಾಸಕ್ಕೆ 100ಕ್ಕೂ ಅಧಿಕ ಮಂದಿ ಬಲಿಯಾಗಿದ್ದು, 125 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ.
ಮಿಲಿಟರಿ ಅಕಾಡೆಮಿಯಲ್ಲಿ ಪದವಿ ಕಾರ್ಯಕ್ರಮವಿತ್ತು. ಇದರಲ್ಲಿ ಭಾಗವಹಿಸಲು ರಕ್ಷಣಾ ಸಚಿವರೂ ಅಲ್ಲಿಗೆ ಆಗಮಿಸಿದ್ದರು. ಅವರು ಸಮಯಕ್ಕೆ ಸರಿಯಾಗಿ ಸ್ಥಳವನ್ನು ತೊರೆದರು. ಅಲ್ಲಿ ಇದ್ದ ಬೇರೆಯವರು ಪ್ರಾಣ ಕಳೆದುಕೊಂಡಿದ್ದಾರೆ. ಪ್ರತ್ಯಕ್ಷದರ್ಶಿಗಳ ಪ್ರಕಾರ, ಕಾರ್ಯಕ್ರಮದ ನಂತರ ಜನರು ಮೈದಾನಕ್ಕೆ ಹೋದರು. ಆಗ ಬಾಂಬ್ ಸ್ಫೋಟ ಸಂಭವಿಸಿದೆ. ಆ ಬಾಂಬ್ ಎಲ್ಲಿಂದ ಬಂತು ಎಂದು ಯಾರಿಗೂ ಅರ್ಥವಾಗಲಿಲ್ಲ. ಸುತ್ತಲೂ ಮೃತದೇಹಗಳು ಮಾತ್ರ ಗೋಚರಿಸಿದವು. ಪ್ರಕರಣದಲ್ಲಿ 100 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು 125 ಜನರು ಗಾಯಗೊಂಡಿದ್ದಾರೆ ಎಂದು ಮಾನವ ಹಕ್ಕುಗಳ ಸಿರಿಯನ್ ವೀಕ್ಷಣಾಲಯ ತಿಳಿಸಿದೆ. ಆದಾಗ್ಯೂ ಆರೋಗ್ಯ ಸಚಿವ ಹಸನ್ ಅಲ್-ಘೋಬಾಶ್ ಸಾವಿನ ಸಂಖ್ಯೆಯನ್ನು 80 ಎಂದು ಹೇಳಿದ್ದಾರೆ. ಜೊತೆಗೆ ಅವರು ಸುಮಾರು 240 ಜನರು ಗಾಯಗೊಂಡಿದ್ದಾರೆ ಎಂದು ಹೇಳಿದ್ದಾರೆ. ಸಿರಿಯಾದ ಮಿಲಿಟರಿ ಅಕಾಡೆಮಿ ಮೇಲೆ ಸ್ಫೋಟಕಗಳನ್ನು ಹೊತ್ತಿದ್ದ ಡ್ರೋನ್ ದಾಳಿಯಲ್ಲಿ 100ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಪದವೀಧರ ವಿದ್ಯಾರ್ಥಿಗಳ ಘಟಿಕೋತ್ಸವ ಸಮಾರಂಭದ ವೇಳೆ ಈ ದಾಳಿ ನಡೆದಿದೆ. ಘಟನೆಯಲ್ಲಿ ಮಕ್ಕಳು, ಮಹಿಳೆಯರು, ವಿದ್ಯಾರ್ಥಿಗಳು ಸೇರಿದಂತೆ ಹಲವು ಮಂದಿ ಸಾವನ್ನಪ್ಪಿದ್ದಾರೆ. ಒಂದು ದಶಕಕ್ಕೂ ಹೆಚ್ಚು ಕಾಲದಿಂದ ಯುದ್ಧದ ಕರಿನೆರಳನ್ನು ಎದುರಿಸುತ್ತಿರುವ ಸಿರಿಯಾದಲ್ಲಿ ಗುರುವಾರ ಮತ್ತೊಮ್ಮೆ ಭಾರೀ ದಾಳಿ ನಡೆದಿದ್ದು, 100ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು, ಹಲವು ಮಂದಿ ಗಾಯಗೊಂಡಿದ್ದಾರೆ.