ಕನಕ-ಶರೀಫ-ಸರ್ವಜ್ಞ ಪ್ರಧಾನ ವೇದಿಕೆ: ಕನಕ, ಶರೀಫ, ಸರ್ವಜ್ಞರಂತಹ ಸಂತರು ಹುಟ್ಟಿದ ನಾಡಿನಲ್ಲಿ ನಡೆದ ೮೬ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸುವರ್ಣ ಅಕ್ಷರದಲ್ಲಿ ಬರೆದಿಡುವ ಐತಿಹಾಸಿಕ ಕ್ಷಣವಾಗಿದೆ ಎಂದು ವಿಧಾನಸಭಾ ಸಭಾಪತಿ ವಿಶ್ವೇಶ್ವರ ಹೆಗಡೆ ಕಾಗೇರಿ ಬಣ್ಣಿಸಿದರು.
ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಗೌರವ ಅತಿಥಿಗಳಾಗಿ ಮಾತನಾಡಿದ ಅವರು, ಹಾವೇರಿ ಜಿಲ್ಲೆಯ ಮಣ್ಣಿನ ಗುಣವೇ ಅಂತಹದ್ದು, ಇಲ್ಲಿ ಯಾವುದೇ ಕಾರ್ಯಕ್ರಮ ನಡೆದರೂ ಯಶಸ್ವಿಗೊಳಿಸುವ ಗುಣ ಇಲ್ಲಿನ ಜನರಲ್ಲಿ ಇದೆ. ಹೀಗಾಗಿ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅತ್ಯಂತ ಯಶಸ್ವಿಗೊಳಿಸುವ ಮೂಲಕ ಮುಂದಿನ ದಿನಗಳಲ್ಲಿ ನಡೆಯುವ ಕನ್ನಡ ಸಾಹಿತ್ಯ ಸಮ್ಮೇಳನಗಳಿಗೆ ಹಾವೇರಿ ಸಮ್ಮೇಳನ ಮಾದರಿಯಾಗಲಿದೆ ಎಂದು ಹರ್ಷ ವ್ಯಕ್ತಪಡಿಸಿದರು.