ಸೂರ್ಯಕಾಂತಿಗೆ ಮೆಚ್ಚುಗೆ ವ್ಯಕ್ತಪಡಿಸಿದ ಯಶ್‌

Advertisement

ಬೆಂಗಳೂರು: ಸೂರ್ಯಕಾಂತಿ ಹೂವಿಗೆ ಮೊದಲು ಗೊತ್ತಾಗಿದ್ದು’ ಕಿರುಚಿತ್ರಕ್ಕೆ ಮೊದಲ ಕಾನ್ ಸಿನಿಮೋತ್ಸವದಲ್ಲಿ ಪ್ರಶಸ್ತಿ ಸಿಗುತ್ತಿದ್ದಂತೆ, ಈ ವಿಚಾರವನ್ನು ಸೋಷಿಯಲ್‌ ಮೀಡಿಯಾದಲ್ಲಿ ಶೇರ್‌ ಮಾಡಿರುವ ನಟ ಯಶ್‌, ಇಡೀತಂಡಕ್ಕೆ ಅಭಿನಂದನೆಗಳನ್ನು ತಿಳಿಸಿದ್ದಾರೆ.
ಮೈಸೂರಿನ ಹುಡುಗ ಚಿದಾನಂದ ನಾಯ್ಕ್ ನಿರ್ದೇಶನದಲ್ಲಿ ಮೂಡಿ ಬಂದಿರುವ ‘ಸನ್ ಫ್ಲವರ್ಸ್ ವರ್ ದ ಫಸ್ಟ್ ಒನ್ಸ್ ಟು ನೋ’ ಕಿರುಚಿತ್ರ ಕಾನ್ ಫಿಲ್ಮ್ ಫೆಸ್ಟಿವೆಲ್‌ಗೆ ಆಯ್ಕೆಯಾಗಿತ್ತು. ಈ ಫೆಸ್ಟಿವೆಲ್‌ಗೆ ಆಯ್ಕೆಯಾದ ಮೊದಲ ಕನ್ನಡಿಗರ ಕಿರುಚಿತ್ರ ಇದಾಗಿದ್ದು, ಚಿದಾನಂದ ನಾಯಕ್‌ಗೆ ಅಭಿನಂದನೆಗಳು. ಕಾನ್ ಚಿತ್ರೋತ್ಸವದಲ್ಲಿ ಅತ್ಯುತ್ತಮ ಕಿರುಚಿತ್ರಕ್ಕಾಗಿ ‘ಲಾ ಸಿನೆಫ್’ ಪ್ರಶಸ್ತಿಯನ್ನು ಗೆದ್ದಿದ್ದಕ್ಕಾಗಿ ‘ಸನ್ ಫ್ಲವರ್ಸ್ ವರ್ ದ ಫಸ್ಟ್ ಒನ್ಸ್ ಟು ನೋ’ ಚಿತ್ರಕ್ಕೆ ಅಭಿನಂದನೆಗಳು ಎಂದು ಯಶ್ ಶುಭಕೋರಿದ್ದು, ನೀವು ಕನ್ನಡ ಜಾನಪದವನ್ನು ಜಾಗತಿಕ ಹಂತಕ್ಕೆ ಕೊಂಡೊಯ್ಯುವುದನ್ನು ಮತ್ತು ಭಾರತೀಯ ಚಿತ್ರರಂಗಕ್ಕೆ ಹೊಸ ಮಾನದಂಡಗಳನ್ನು ಹೊಂದಿಸುವುದನ್ನು ನೋಡಲು ಹೆಮ್ಮೆಪಡುತ್ತೇನೆ ಎಂದಿದ್ದಾರೆ.