ಸೆ. 14ರಂದು ರಾಣಿ ಚನ್ನಮ್ಮ ವಿವಿ ಘಟಿಕೋತ್ಸವ: ನಟ ರಮೇಶ ಅರವಿಂದಗೆ `ಗೌಡಾ’

ಘಟಿಕೋತ್ಸವ
Advertisement

ಬೆಳಗಾವಿಯ ಭೂತರಾಮನಹಟ್ಟಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ 10ನೇ ಘಟಿಕೋತ್ಸವ ಸೆ. 14ರಂದು ಸುವರ್ಣ ವಿಧಾನಸೌಧದ ಮೊದಲ ಮಹಡಿಯಲ್ಲಿರುವ ಸಭಾಂಗಣದಲ್ಲಿ ಜರುಗಲಿದೆ ಎಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ರಾಮಚಂದ್ರ ಗೌಡ ಹೇಳಿದರು.
ಸೋಮವಾರ ನಗರದ ವಾರ್ತಾ ಇಲಾಖೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೆ. 14ರಂದು ನಡೆಯಲಿರುವ ಘಟಿಕೋತ್ಸವ ಸಮಾರಂಭದ ಅಧ್ಯಕ್ಷತೆಯನ್ನು ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್ ಅವರು ವಹಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಉನ್ನತ ಶಿಕ್ಷಣ ಸಚಿವ ಡಾ.ಅಶ್ವಥ್ ನಾರಾಯಣ ಆಗಮಿಸಲಿದ್ದಾರೆ. ಆಂಧ್ರಪ್ರದೇಶದ ವಿಜಯನಗರ ಕೇಂದ್ರೀಯ ಬುಡಕಟ್ಟು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಟಿ.ವಿ. ಕಟ್ಟಿಮನಿ ಘಟಿಕೋತ್ಸವದ ಭಾಷಣ ಮಾಡಲಿದ್ದಾರೆ ಎಂದರು.
ಘಟಿಕೋತ್ಸವದಲ್ಲಿ ಈ ಬಾರಿ ವಿವಿಧ ಕ್ಷೇತ್ರದಲ್ಲಿ ಗಣನೀಯವಾಗಿ ಸೇವೆ ಸಲ್ಲಿಸಿದ ಮೂವರು ಗಣ್ಯರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗುವುದು. ನಗರಾಭಿವೃದ್ಧಿ ತಜ್ಞರೂ, ಸಮಾಜ ಸೇವಕ ರವಿಚಂದರ್ ಅವರಿಗೆ ಡಾಕ್ಟರ್ ಆಫ್ ಸೈನ್ಸ್, ಖ್ಯಾತ ಕನ್ನಡ ಚಲನಚಿತ್ರ ನಟ, ನಿರ್ದೇಶಕ, ನಿರ್ಮಾಪಕ ರಮೇಶ್ ಅರವಿಂದ ಅವರಿಗೆ ಡಾಕ್ಟರ್ ಆಫ್ ಲೆರ‍್ಸ್ ಹಾಗೂ ಬೀದರ್‌ನ ಬಸವ ತತ್ವ ಪ್ರಚಾರಕಿ, ಕಾಯಕ ದಾಸೋಹ ಪ್ರತಿಪಾದಕಿ ಅಕ್ಕ ಅನ್ನಪೂರ್ಣ ತಾಯಿ ಅವರಿಗೆ ಡಾಕ್ಟರ್ ಆಫ್ ಲೆರ‍್ಸ್ ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಲಾಗುವುದು ಎಂದರು.
ಇನ್ನು 10ನೇ ಘಟಿಕೋತ್ಸವದಲ್ಲಿ ಒಟ್ಟು 43,607 ವಿದ್ಯಾರ್ಥಿಗಳು ಪದವಿ ಪಡೆದುಕೊಳ್ಳಲಿದ್ದಾರೆ. ಇದರಲ್ಲಿ 11 ಚಿನ್ನದ ಪದಕವನ್ನು ಸ್ನಾತಕೋತ್ತರ ಹಾಗೂ ಸ್ನಾತಕ ವಿದ್ಯಾರ್ಥಿಗಳಿಗೆ ಹಾಗೂ 48 ಪಿಎಚ್‌ಡಿ ಪದವಿಗಳನ್ನು ಪ್ರದಾನ ಮಾಡಲಾಗುತ್ತದೆ ಎಂದು ಅವರು ಮಾಹಿತಿ ನೀಡಿದರು.