ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್‌ನ ಸ್ಟೇರಿಂಗ್ ತುಂಡಾಗಿ ಕಂದಕಕ್ಕೆ ಉರುಳಿ ಬಿದ್ದ ಘಟನೆ ಉತ್ತರಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ 16ನೇ ಮೈಲಿಕಲ್ ಬಳಿ ನಡೆದಿದೆ.
ಬಸ್ ಕಂದಕಕ್ಕೆ ಉರುಳಿ ಬಿದ್ದರೂ ಅದು ಪಾತಾಳಕ್ಕೆ ಬೀಳದಂತೆ ಮರಗಳು ತಡೆದಿವೆ. ಘಟನೆಯಲ್ಲಿ ಕೆಲವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಕಾರವಾರದಿಂದ ಹಳಿಯಾಳ ಕಡೆಗೆ ಹೊರಟಿದ್ದ ಬಸ್‌ನಲ್ಲಿ 40ಕ್ಕೂ ಹೆಚ್ಚು ಜನ ಪ್ರಯಾಣಿಕರು ಪ್ರಾಯಾಣಿಸುತ್ತಿದ್ದು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.