ಬೆಂಗಳೂರು: ತುಳಿತಕ್ಕೆ ಒಳಪಟ್ಟ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳಿಗೆ ಆತ್ಮಗೌರವ, ಆತ್ಮಸನ್ಮಾನ, ಸಮಾನ ಅವಕಾಶ ಹಾಗೂ ಸ್ವಾಭಿಮಾನದ ಬದುಕು ಕಲ್ಪಿಸಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ವಾಲ್ಮೀಕಿ ಜಯಂತಿಯ ಅಂಗವಾಗಿ ಇಂದು ವಾಲ್ಮೀಕಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇಡೀ ಜಗತ್ತಿಗೆ ದಾರಿದೀಪವಾಗಿರುವ ಮಹರ್ಷಿ ವಾಲ್ಮೀಕಿ ಅವರ ಜಯಂತಿಯನ್ನು ಅತ್ಯಂತ ವಿಜೃಂಭಣೆಯಿಂದ ಅರ್ಥಪೂರ್ಣವಾಗಿ ಆಚರಿಸುತ್ತಿದ್ದೇವೆ. ಮಹರ್ಷಿ ವಾಲ್ಮೀಕಿ ಅವರ ತತ್ವ ಆದರ್ಶಗಳನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಲು ಅಗತ್ಯವಿರುವ ಕಾರ್ಯಕ್ರಮಗಳನ್ನು ನಾವು ರೂಪಿಸುತ್ತಿದ್ದೇವೆ ಎಂದು ತಿಳಿಸಿದರು.