ಹಣಕಾಸು ಇಲಾಖೆ ಅಧಿಕಾರಿಗಳ ಜೊತೆ ಸಭೆ

Advertisement

ಬೆಂಗಳೂರು: ಜೂನ್ ತಿಂಗಳಿನಿಂದ ಗ್ಯಾರಂಟಿ ಘೋಷಣೆಗಳ ಬಗ್ಗೆ ಅಧಿಕೃತ ಜಾರಿ ಬರುವ ಹಿನ್ನೆಲೆಯಲ್ಲಿ ವಸಂತನಗರದ ಹಣಕಾಸು ನಿಗಮದ ಕಚೇರಿಯಲ್ಲಿ ಹಣಕಾಸು ಇಲಾಖೆ ಅಧಿಕಾರಿಗಳ ಜೊತೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸಭೆ ನಡೆಸಿದ್ದಾರೆ. ರಾಜ್ಯದ ಹಣಕಾಸು ಸ್ಥಿತಿ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಸಂಗ್ರಹಿಸಿದ್ದಾರೆ. ಕಾಂಗ್ರೆಸ್​ನ 5 ಗ್ಯಾರಂಟಿ ಅನುಷ್ಠಾನಕ್ಕೆ ತರಬೇಕಾಗಿರುವ ಹಿನ್ನೆಲೆ ಹಣಕಾಸು ಇಲಾಖೆ ಅಧಿಕಾರಿಗಳ ಜತೆ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಚರ್ಚೆ ನಡೆಸುತ್ತಿದ್ದಾರೆ.