ಹಾವೇರಿಯಲ್ಲಿ ಜನೆವರಿ 6, 7, 8 ರಂದು ನಡೆಯಲಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯದ ಲಾಂಛನವನ್ನು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಂ ಹೆಬ್ಬಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್ ಅವರು ಬಿಡುಗಡೆಗೊಳಿಸಿದರು.
ಬಳಿಕ ಮಾಹಿತಿ ನೀಡಿದ ಕಸಾಪ ಅಧ್ಯಕ್ಷ ಮಹೇಶ ಜೋಶಿ,
ಹಾವೇರಿ ಜಿಲ್ಲೆಯನ್ನು ಪ್ರತಿನಿಧಿಸುವ ದೇವಸ್ಥಾನಗಳು, ಪ್ರಸಿದ್ಧ ಸ್ಥಳಗಳು, ವ್ಯಕ್ತಿಗಳನ್ನು ಲಾಂಛನ ಒಳಗೊಂಡಿದೆ. ಯಾರು, ಯಾರನ್ನು ಬಿಟ್ಟಿದ್ದೇವೋ ಅವರನ್ನು ವೇದಿಕೆ, ದ್ವಾರ ಬಾಗಿಲುಗಳಿಗೆ ಹೆಸರು ಇಡಲಾಗುವುದು ಎಂದು ತಿಳಿಸಿದರು.
ಈ ವೇಳೆ ಕಸಾಪ ಅಧ್ಯಕ್ಷ ನಾಡೋಜ ಡಾ.ಮಹೇಶ್ ಜೋಶಿ, ಜಿಲ್ಲಾಧಿಕಾರಿ ರಘುನಂದನ್ ಮೂರ್ತಿ, ಜಿಪಂ ಸಿಇಒ ಮಹ್ಮದ್ ರೋಷನ್, ಶಾಸಕರಾದ ನೆಹರು ಓಲೇಕಾರ, ಅರುಣಕುಮಾರ್ ಪೂಜಾರ, ಮಾಜಿ ಸಚಿವ ರುದ್ರಪ್ಪ ಲಮಾಣಿ, ನಗರಸಭೆ ಅಧ್ಯಕ್ಷ ಸಂಜೀವಕುಮಾರ್ ನೀರಲಗಿ, ಕಸಾಪ ಜಿಲ್ಲಾಧ್ಯಕ್ಷ ಎಚ್.ಬಿ. ಲಿಂಗಯ್ಯ ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.