ಹಿಂದೂ ಧರ್ಮದ ವಿರುದ್ಧ ಹೇಳಿಕೆ: ನಟ ಚೇತನ್ ಬಂಧನ

Advertisement

ನಟ ಚೇತನ್ ಹಿಂದುತ್ವದ ಬಗ್ಗೆ ಕೆಟ್ಟದಾಗಿ ಪೋಸ್ಟ್ ಮಾಡಿದ ಚೇತನ್ ಅವರನ್ನು ಪೊಲೀಸ್‌ರು ಬಂದಿಸಿದ್ದಾರೆ. ಚೇತನ್‌ ವಿರುದ್ಧ ಐಪಿಸಿ ಸೆಕ್ಷನ್ 295A, 505B ಅಡಿಯಲ್ಲಿ ಕೇಸ್ ದಾಖಲಾಗಿದ್ದು. ಹಿಂದೂಪರ ಸಂಘಟನೆಗಳು ಚೇತನ್ ವಿರುದ್ಧ ದೂರು ನೀಡಿದ್ದಾರೆ. ಶೇಷಾದ್ರಿಪುರ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ.
ಉರಿಗೌಡ ನಂಜೇಗೌಡ ವಿಚಾರವಾಗಿ ಅವರು ಆಕ್ಷೇಪಾರ್ಹ ಪೋಸ್ಟ್ ಮಾಡಿದ್ದರು. ಈ ಕುರಿತು ಶಿವಕುಮಾರ್ ಎನ್ನುವವರು ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಚೇತನ್ ತಮ್ಮ ಫೇಸ್ ಬುಕ್ ಮತ್ತು ಟ್ವಿಟರ್ ಅಲ್ಲಿ ಉರೀಗೌಡ ನಂಜೇಗೌಡ ಬಗ್ಗೆ ಪೋಸ್ಟ್ ವೊಂದನ್ನು ಹಂಚಿಕೊಂಡಿದ್ದು, ಅದರಲ್ಲಿ ಹಿಂದುತ್ವವನ್ನು ಸುಳ್ಳಿನ ಆಧಾರದ ಮೇಲೆ ಕಟ್ಟಲಾಗಿದೆ. ಸಾವರ್ಕರ್ ಹೇಳಿಕೆ, ರಾಮನು ರಾವಣನನ್ನು ಸೋಲಿಸಿ ಅಯೋಧ್ಯಗೆ ಹಿಂದಿರುಗಿದಾ ಭಾರತೀಯ ರಾಷ್ಟ್ರ ಪ್ರಾರಂಭವಾಯಿತು ಎನ್ನುವುದು ಇದು ಒಂದು ಸುಳ್ಳು. 1992ರಲ್ಲಿ ಬಾಬರಿ ಮಸೀದಿ ರಾಮನ ಜನ್ಮ ಭೂಮಿ ಕುರಿತು ಇದು ಒಂದು ಸುಳ್ಳು. ಈಗ 2023ರಲ್ಲಿ ಉರಿಗೌಡ ಮತ್ತು ನಂಜೇಗೌಡರು ಟಿಪ್ಪುವನ್ನು ಕೊಂದರು ಎನ್ನುವುದು ಇದು ಕೂಡ ಒಂದು ಸುಳ್ಳು. ಹಿಂದುತ್ವವನ್ನು ಸತ್ಯದಿಂದ ಸೋಲಿಸಬಹುದು, ಸತ್ಯವೇ ಸಮಾನತೆ’ ಎಂದು ಪೋಸ್ಟ್ ನಲ್ಲಿ ಬರೆದಿದ್ದಾರೆ.


ಈ ಪೋಸ್ಟ್ ಅನ್ನು ಆಧರಿಸಿಯೇ ಶಿವಕುಮಾರ್ ಎಂಬುವರು ದೂರು ನೀಡಿದ್ದಾರೆ. ದೂರಿನಲ್ಲಿ ಚೇತನ್ ಅವರು ಹಿಂದೂ ಭಾವನೆಗಳಿಗೆ ಧಕ್ಕೆ ತರುವ ರೀತಿಯಲ್ಲಿ ಟ್ವೀಟ್ ಮಾಡಿದ್ದಾರೆ ಎಂದು ಉಲ್ಲೇಖಿಸಿದ್ದಾರೆ ಶಿವಕುಮಾರ್. ಈ ದೂರನ್ನು ಆಧರಿಸಿ ಎಫ್ ಐ ಆರ್ ದಾಖಲಿಸಿದ್ದ ಶೇಷಾದ್ರಿಪುರಂ ಪೊಲೀಸರು ಬೆಂಗಳೂರಿನ ಮ್ಯಾಜಿಸ್ಟ್ರೇಟ್ ಕೋರ್ಟ್ ಮುಂದೆ ಹಾಜರುಪಡಿಸಿದ್ದಾರೆ.