ಹಿಜಾಬ್‌ ವಿವಾದ: ಸದ್ಯಕ್ಕೆ ಯಥಾಸ್ಥಿತಿ ಮುಂದುವರಿಕೆ

hijab
Advertisement

ರಾಜ್ಯದಲ್ಲಿ ಭಾರೀ ವಿವಾದಕ್ಕೆ ಕಾರಣವಾದ ಹಿಜಾಬ್‌ ಪ್ರಕರಣವನ್ನು ಮುಖ್ಯ ನ್ಯಾಯಾಧೀಶರ ನೇತೃತ್ವದ ಪೀಠಕ್ಕೆ ವರ್ಗಾವಣೆ ಮಾಡಿ ಸುಪ್ರೀಂ ಕೋರ್ಟ್‌ ಆದೇಶ ನೀಡಿದೆ.
ಶಾಲಾ-ಕಾಲೇಜು ತರಗತಿಯೊಳಗೆ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಹಿಜಾಬ್​ ನಿಷೇಧಿಸಿ ಹೈಕೋರ್ಟ್​ ನೀಡಿದ ಆದೇಶದ ವಿರುದ್ಧ ಸಲ್ಲಿಸಲಾದ ಮೇಲ್ಮನವಿ ಅರ್ಜಿಗಳ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ತೀರ್ಪನ್ನು ಸುಪ್ರೀಂಕೋರ್ಟ್​ ಇಂದು ಪ್ರಕಟಿಸಿದೆ. ಇಬ್ಬರು ನ್ಯಾಯಮೂರ್ತಿಗಳು ಭಿನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ರಾಜ್ಯದ ಶಿಕ್ಷಣ ಸಂಸ್ಥೆಗಳಲ್ಲಿ ಹೇರಲಾಗಿರುವ ಹಿಜಾಬ್‌ ನಿಷೇಧ ಸದ್ಯಕ್ಕೆ ಮುಂದುವರಿಯಲಿದೆ.
ನ್ಯಾಯಮೂರ್ತಿ ಹೇಮಂತ್ ಗುಪ್ತಾ ಅವರು, ಮೇಲ್ಮನವಿ ಅರ್ಜಿಯ ವಜಾ ಪರ ತೀರ್ಪು ನೀಡಿದ್ದರೆ, ನ್ಯಾಯಮೂರ್ತಿ ಸುಧಾಂಶು ಧುಲಿಯಾ ಕರ್ನಾಟಕ ಹೈಕೋರ್ಟ್​ ಆದೇಶವನ್ನು ರದ್ದು ಮಾಡುವ ಪರವಾಗಿ ತೀರ್ಪು ನೀಡಿದ್ದಾರೆ. ಹೀಗಾಗಿ ಸುಪ್ರೀಂ ಕೋರ್ಟ್​ ಮುಖ್ಯ ನ್ಯಾಯಮೂರ್ತಿ ಅವರ ಪೀಠದಿಂದ ಅಂತಿಮ ತೀರ್ಪು ಹೊರಬೀಳಲಿದೆ.